2013ರಲ್ಲಿ ಸಚಿನ್ ತೆಂಡುಲ್ಕರ್ ಅವರಿಗೆ ಭಾರತ ರತ್ನ ನೀಡುವಾಗಲೇ ಧ್ಯಾನ್ ಚಂದ್ ಅವರಿಗೂ ಈ ಅತ್ಯುನ್ನತ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು.

ನವದೆಹಲಿ(ಜೂ.08): ಹಾಕಿ ದಿಗ್ಗಜ ಧ್ಯಾನ್‌ ಚಂದ್‌ಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಬೇಕೆಂದು ಕೇಂದ್ರ ಕ್ರೀಡಾ ಸಚಿವ ವಿಜಯ್‌ ಗೊಯಲ್‌, ಪ್ರಧಾನಿಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಖಚಿತ ಪಡಿಸಿದ ಕ್ರೇಂದ ಸಚಿವರು, ‘ಧ್ಯಾನ್‌ ಚಂದ್‌ ಅವರಿಗೆ ಭಾರತ ರತ್ನ ನೀಡುವುದು, ದೇಶಕ್ಕೆ ಅವರು ಸಲ್ಲಿಸಿದ ಸೇವೆಗೆ ಗೌರವ ಸಲ್ಲಿಸಿದಂತಾಗುತ್ತದೆ' ಎಂದಿದ್ದಾರೆ.

ಹಾಕಿ ಮಾಂತ್ರಿಕ ಧ್ಯಾನ್ ಚಂದ್ 1928, 1932 ಮತ್ತು 1936ರ ಓಲಂಪಿಕ್ಸ್'ನಲ್ಲಿ ಭಾರತಕ್ಕೆ ಸತತ ಮೂರು ಚಿನ್ನದ ಪದಕ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2013ರಲ್ಲಿ ಸಚಿನ್ ತೆಂಡುಲ್ಕರ್ ಅವರಿಗೆ ಭಾರತ ರತ್ನ ನೀಡುವಾಗಲೇ ಧ್ಯಾನ್ ಚಂದ್ ಅವರಿಗೂ ಈ ಅತ್ಯುನ್ನತ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು.