ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯ ತಂಡವನ್ನು ಮುನ್ನಡೆಸಿದ ಧೋನಿ, ತನ್ನ ತಂಡಕ್ಕೆ ಗೆಲುವು ತಂದುಕೊಡಲು ವಿಫಲವಾದರು.
ಕೋಲ್ಕತಾ(ಫೆ.25): ಬ್ಯಾಟಿಂಗ್ ಹಾಗೂ ಬೌಲಿಂಗ್'ನಲ್ಲಿ ಆಲ್ರೌಂಡ್ ಪ್ರದರ್ಶನ ನೀಡಿದ ಕರ್ನಾಟಕ ತಂಡ, ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ರನ್'ಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ‘ಡಿ’ ಗುಂಪಿನ ಪಂದ್ಯದಲ್ಲಿ ಗೆಲುವಿಗೆ ಕರ್ನಾಟಕ ನೀಡಿದ್ದ 267 ರನ್ ಗುರಿಗೆ ಉತ್ತರವಾಗಿ ಎಂ.ಎಸ್. ಧೋನಿ ಸಾರಥ್ಯದ ಜಾರ್ಖಂಡ್ ಕಟ್ಟಕಡೆಯವರೆಗೂ ಹೋರಾಡಿ ಅಂತಿಮವಾಗಿ 49.5 ಓವರ್‌ಗಳಲ್ಲಿ 261 ರನ್'ಗೆ ಆಲೌಟ್ ಆಯಿತು.
ಇದರೊಂದಿಗೆ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯ ತಂಡವನ್ನು ಮುನ್ನಡೆಸಿದ ಧೋನಿ, ತನ್ನ ತಂಡಕ್ಕೆ ಗೆಲುವು ತಂದುಕೊಡಲು ವಿಫಲವಾದರು. ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಸರ್ವೀಸಸ್ ವಿರುದ್ಧ ಕರ್ನಾಟಕ ಸೆಣಸಲಿದೆ.
ಸಂಕ್ಷಿಪ್ತ ಸ್ಕೋರ್
ಕರ್ನಾಟಕ: 266/10
(ಆರ್. ಸಮರ್ಥ್ 71, ಮನೀಶ್ ಪಾಂಡೆ 77; ರಾಹುಲ್ ಶುಕ್ಲಾ 47/2)
ಜಾರ್ಖಂಡ್: 261/10
(ಸೌರಭ್ ತಿವಾರಿ 68, ಧೋನಿ 43; ಗೌತಮ್ 58/4)
ಫಲಿತಾಂಶ:
ಕರ್ನಾಟಕಕ್ಕೆ 5 ರನ್ ಗೆಲುವು
