ಇದರ ನಡುವೆ ಆಟಗಾರರ ನೂತನ ಕೇಂದ್ರ ಗುತ್ತಿಗೆ ಸಹಿ ಹಾಕುವುದಿಲ್ಲ ಎಂದು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ

ನವದೆಹಲಿ(ಮಾ.09): ಬಿಸಿಸಿಐ ಹಾಗೂ ಸುಪ್ರೀಂಕೋರ್ಟ್ ನೇಮಿತ ಆಡಳಿತ ಸಮಿತಿ (ಸಿಒಎ) ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ.

ಬಿಸಿಸಿಐ ಸಂವಿಧಾನದ ಪ್ರಕಾರಬಿಸಿಸಿಐನ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಕಾರ್ಯದರ್ಶಿ ಅಮಿತಾಭ್ ಚೌಧರಿ, ಖಜಾಂಚಿ ಅನಿರುದ್ಧ್ ಚೌಧರಿ, ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾರನ್ನೂ ವಜಾ ಮಾಡಿ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ತನ್ನ 8ನೇ ವರದಿಯಲ್ಲಿ ಶಿಫಾರಸು ಮಾಡಿದೆ.

ಆಟಗಾರರ ಗುತ್ತಿಗೆಗೆ ಸಹಿ ಹಾಕಲ್ಲ: ಇದರ ನಡುವೆ ಆಟಗಾರರ ನೂತನ ಕೇಂದ್ರ ಗುತ್ತಿಗೆ ಸಹಿ ಹಾಕುವುದಿಲ್ಲ ಎಂದು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ