ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಪ್ರೇಮಿಗಳ ದಿನವನ್ನ ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ವಿರುಷ್ಕಾ ಜೋಡಿಯ ವ್ಯಾಲಂಟೈನ್ ಡೇ ಹೇಗಿತ್ತು? ಇಲ್ಲಿದೆ ವಿವರ.
ನವದೆಹಲಿ(ಫೆ.14): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರೇಮಿಗಳ ದಿನಾಚರಿಸಿದ್ದಾರೆ. ಕೊಹ್ಲಿ ಹಾಗೂ ಅನುಷ್ಕಾ ಪ್ರೀತಿಸಿ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ವಿಶ್ರಾಂತಿಯಲ್ಲಿರುವ ಕೊಹ್ಲಿ, ಪತ್ನಿ ಅನುಷ್ಕಾ ಜೊತೆ ವ್ಯಾಲೆಂಟೈನ್ ಡೇ ಆಚರಿಸಿದ್ದಾರೆ.
ಇದನ್ನೂ ಓದಿ: ವಿರುಷ್ಕಾ ಜೋಡಿ ಹೆಸರಿಗೆ ಕಳಂಕ, ಹಬ್ಬಿದೆ ಸುಳ್ಳು ಸುದ್ದಿ..!
ದೆಹಲಿಯಲ್ಲಿರುವ ನುಎವಾ ರೆಸ್ಟೋರೆಂಟ್‌ನಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಪ್ರೇಮಿಗಳ ದಿನಾಚರಣೆ ಮಾಡಿದ್ದಾರೆ. ರೆಡ್ ಹಾಟ್ ಡ್ರೆಸ್‌ನಲ್ಲಿ ಅನುಷ್ಕಾ ಮಿಂಚಿದರೆ, ಕೊಹ್ಲಿ ಕಪ್ಪು ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಕೊಹ್ಲಿ ಪ್ರೇಮಿಗಳ ದಿನಾಚರಣೆಯ ಫೋಟೋವೊಂದನ್ನ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
About last night with my valentine. ❤️👫 #greatmeal #nueva #loveit @AnushkaSharma @nueva_world pic.twitter.com/DaKRA90ocS
— Virat Kohli (@imVkohli) February 14, 2019
ಇದನ್ನೂ ಓದಿ: ವಿಶ್ವಕಪ್ 2019: ವಿರಾಟ್ ಕೊಹ್ಲಿಗೆ 4ನೇ ಕ್ರಮಾಂಕ?
ನನ್ನ ಪ್ರೀತಿಯ ಜೊತೆ ಎಂದು ಕೊಹ್ಲಿ ಬರೆದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ 2 ಟೆಸ್ಟ್ ಹಾಗೂ 3 ಟಿ20 ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ನ್ಯೂಜಿಲೆಂಡ್‌ನಲ್ಲಿ ಸುತ್ತಾಡಿದ್ದರು. ಬಳಿಕ ಭಾರತಕ್ಕೆ ಮರಳಿ ವಿಶ್ರಾಂತಿ ಜಾರಿದ್ದ ಈ ಜೋಡಿ ಇದೀಗ ಪ್ರೇಮಿಗಳ ದಿನಾಚರಣೆ ಮಾಡಿಕೊಂಡಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 14, 2019, 5:29 PM IST