ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನೆಯಲ್ಲಿ ದೀಪಾವಳಿ ಸಂಭ್ರಮ. ಇದೇ ಸಂತಸದ ಸಮಯದಲ್ಲಿ ವಿರುಷ್ಕಾ ಜೋಡಿ ಎಲ್ಲರಿಗೂ ದೀಪಾವಳಿ ಶುಭಾಶಯ ಕೋರಿದ್ದಾರೆ.
ಮುಂಬೈ(ನ.07): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮನೆಯಲ್ಲಿ ದೀಪಾವಳಿ ಸಂಭ್ರಮ ಗರಿಗೆದರಿದೆ. ಸಂಪೂರ್ಣ ಮನೆಯನ್ನ ದೀಪಗಳಿಂದ ಅಲಂಕೃತಗೊಳಿಸಿ ವಿರುಷ್ಕಾ ಜೋಡಿ, ಎಲ್ಲರಿಗೂ ದೀಪಾವಳಿ ಶುಭಾಶಯ ಕೋರಿದ್ದಾರೆ.
ಟ್ವಿಟರ್ ಮೂಲಕ ಕೊಹ್ಲಿ ಹಾಗೂ ಅನುಷ್ಕಾ ಶುಭಾಶಯ ಕೋರಿದ್ದಾರೆ. ನವೆಂಬರ್ 5 ರಂದು ಉತ್ತರಖಂಡದ ಹರಿದ್ವಾರದಲ್ಲಿ ಹುಟ್ಟುಹಬ್ಬ ಆಚರಿಸಿದ ವಿರಾಟ್ ಕೊಹ್ಲಿ ಇದೀಗ ತವರಿಗೆ ವಾಪಾಸ್ಸಾಗಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ, ನವೆಂಬರ್ 21 ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ.
