ದುಬೈ(ನ.13): ಐಸಿಸಿ ನೂತನ  ರ‍್ಯಾಂಕಿಂಗ್ ಪಟ್ಟಿ ಪ್ರಕಟಗೊಂಡಿದೆ. ಏಕದಿನದಲ್ಲಿ  ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಅಗ್ರಸ್ಥಾನ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಬೌಲರ್‌ಗಳಲ್ಲಿ ಜಸ್‌ಪ್ರೀತ್ ಬುಮ್ರಾ ಅಗ್ರಸ್ಥಾನ ಅಲಂಕರಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ  ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಬ್ಯಾಟಿಂಗ್ ಟಾಪ್ 10 ಪಟ್ಟಿಯಲ್ಲಿ ಶಿಖರ್ ಧವನ್ ಸ್ಥಾನ ಪಡೆದಿದ್ದಾರೆ. ಧವನ್ 8ನೇ ಸ್ಥಾನ ಅಲಂಕರಿಸಿದ್ದಾರೆ.

ಬೌಲಿಂಗ್‌ನಲ್ಲಿ ಕುಲ್ದೀಪ್ ಯಾದವ್ 3ನೇ ಸ್ಥಾನದಲ್ಲಿದ್ದರೆ,  ಯಜುವೇಂದ್ರ ಚಹಾಲ್ 5ನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟಾಪ್ 10 ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ.