ಅಭ್ಯಾಸಕ್ಕೆ ತೆರಳುವ ವೇಳೆ ಬಸ್‌ನಲ್ಲಿ ಅಕ್ಕ-ಪಕ್ಕ ಕುಳಿತಿದ್ದ ಕೊಹ್ಲಿ ಮತ್ತು ಧವನ್ ಭಾಂಗ್ರಾ ನೃತ್ಯ ಮಾಡುವ ಮೂಲಕ ಗಮನಸೆಳೆದಿದ್ದಾರೆ.

ಲಂಡನ್(ಮೇ.27): ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ತಂಡದ ಬಸ್‌ನಲ್ಲಿ ಭಾಂಗ್ರಾ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಭ್ಯಾಸಕ್ಕೆ ತೆರಳುವ ವೇಳೆ ಬಸ್‌ನಲ್ಲಿ ಅಕ್ಕ-ಪಕ್ಕ ಕುಳಿತಿದ್ದ ಕೊಹ್ಲಿ ಮತ್ತು ಧವನ್ ಭಾಂಗ್ರಾ ನೃತ್ಯ ಮಾಡುವ ಮೂಲಕ ಗಮನಸೆಳೆದಿದ್ದಾರೆ.

ಈ ವಿಡಿಯೋವನ್ನು ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ಅಪ್‌'ಲೋಡ್ ಮಾಡಿದ್ದಾರೆ.

20 ಸೆಕೆಂಡ್‌'ಗಳ ಈ ವಿಡಿಯೋ ತುಣುಕನ್ನು 5 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.