ರಿಲ್ಯಾಕ್ಸ್ ಮೂಡ್‌ಗೆ ಜಾರಿದ ವಿರುಷ್ಕಾ

https://static.asianetnews.com/images/authors/2c1b126a-9adf-5f82-ae4f-e781463685fe.jpg
First Published 11, Jul 2018, 2:49 PM IST
Virat Kohli Anushka Sharma seal it with a kiss
Highlights

ಇಂಗ್ಲೆಂಡ್ ವಿರುದ್ಧದ  ಟಿ20 ಸರಣಿ ಬಳಿಕ ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು ವಿಶ್ರಾಂತಿ ಪಡೆಯುತ್ತಿದ್ದಾರೆ. ಏಕದಿನ ಸರಣಿ ಆರಂಭಕ್ಕೂ ಮೊದಲು ಸಿಕ್ಕಿರೋ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ದಿನಚರಿ ಹೇಗಿದೆ? ಇಲ್ಲಿದೆ.

ಲಂಡನ್(ಜು.11): ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಈ ನಡುವೆ ಸಿಕ್ಕಿರೋ ಅಲ್ವ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ.

ವಿಶ್ರಾಂತಿ ಸಮಯದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಲಂಡನ್‌ ಸುತ್ತಾಟ ನಡೆಸಿದ್ದಾರೆ. ಇಷ್ಟೇ ಅಲ್ಲ, ಕೊಹ್ಲಿ ಡೇ ಔಟ್ ವಿಥ್ ಮೈ ಬ್ಯೂಟಿ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್‌ಲೋಡ್ ಮಾಡಿದ್ದಾರೆ.

 

 

ವಿರಾಟ್ ಕೊಹ್ಲಿ ಕೆನ್ನೆಗೆ ಪತ್ನಿ ಅನುಷ್ಕಾ ಮುತ್ತಿಕ್ಕುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ. ಇಬ್ಬರೂ ಶೇಡ್ಸ್ ಧರಿಸಿ ಫೋಟೋಗೆ ಫೋಸ್ ನೀಡಿದ್ದಾರೆ. ಟ್ವಿಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕೊಹ್ಲಿ ಈ ಪೋಟೋ ಪೋಸ್ಟ್ ಮಾಡಿದ್ದಾರೆ.

2017ರ ಡಿಸೆಂಬರ್‌ನಲ್ಲಿ ಕೊಹ್ಲಿ ಹಾಗೂ ಅನುಷ್ಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿಗೆ ಅನುಷ್ಕಾ ಸಾಥ್ ನೀಡಿದ್ದಾರೆ. ಜುಲೈ 7 ರಂದು ಟೀಂ ಇಂಡಿಯಾ ಮಾಜಿ ನಾಯಕ ಎಂ ಎಸ್ ಧೋನಿ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲೂ ಅನುಷ್ಕಾ ಹಾಗೂ ಕೊಹ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.
 

loader