ಬೆಂಗಳೂರು: 12ನೇ ಆವೃತ್ತಿಯ ಐಪಿಎಲ್‌ಗೆ ಕೇವಲ 4 ದಿನ ಮಾತ್ರ ಬಾಕಿ ಇದ್ದು, ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯಾದರೂ ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿದೆ. 

ಅಭಿಮಾನಿಗಳಿಗಾಗಿ RCB ಆ್ಯಪ್‌!

ಸೋಮವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಂಡದ ನಾಯಕ ವಿರಾಟ್‌ ಕೊಹ್ಲಿ ಅಭ್ಯಾಸ ಆರಂಭಿಸಿದರು. ತಾವು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿರುವ ಫೋಟೋಗಳನ್ನು ಟ್ವೀಟರ್‌ನಲ್ಲಿ ಹಾಕಿರುವ ವಿರಾಟ್‌, ‘ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮರಳಿರುವುದಕ್ಕೆ ಖುಷಿಯಾಗುತ್ತಿದೆ. ಮೈದಾನಕ್ಕಿಳಿದು ಆಟ ಆರಂಭಿಸಲು ಉತ್ಸುಕನಾಗಿದ್ದೇನೆ’ ಎಂದು ಬರೆದಿದ್ದಾರೆ. 

ಮಾ.23ರಂದು ಐಪಿಎಲ್‌ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿ ತಂಡ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೆಣಸಲಿದೆ.

ಮತ್ತೊಬ್ಬ ಅಭಿಮಾನಿ ಜತೆ ಧೋನಿ ಜೂಟಾಟ!

ಆರ್’ಸಿಬಿ ಪಂದ್ಯಗಳು ಹೀಗಿವೆ: