ನವದೆಹಲಿ(ಮೇ.19): ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸೋಷಿಯಲ್‌ ಮೀಡಿಯಾದಲ್ಲೂ ಶತಕ ಬಾರಿಸಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಅವರ ಹಿಂಬಾಲಕರ ಸಂಖ್ಯೆ 100 ಮಿಲಿಯನ್‌ (10 ಕೋಟಿ) ದಾಟಿದೆ. 10 ಕೋಟಿ ಹಿಂಬಾಲಕರನ್ನು ಹೊಂದಿರುವ ವಿಶ್ವದ ಮೊದಲ ಹಾಗೂ ಏಕೈಕ ಕ್ರಿಕೆಟಿಗ ಎನ್ನುವ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ. 

ಇದನ್ನೂ ಓದಿ: ವಿಶ್ವಕಪ್ 2019: ಕೊಹ್ಲಿ ನಾಯಕತ್ವದ ಕುರಿತು ದ್ರಾವಿಡ್ ಅಭಿಪ್ರಾಯವೇನು?

ಕೊಹ್ಲಿಯ ಅಧಿಕೃತ ಫೇಸ್‌ಬುಕ್‌ ಖಾತೆಗೆ 37.1 ಮಿಲಿಯನ್‌ (3.71 ಕೋಟಿ) ಮಂದಿ ಹಿಂಬಾಲಕರಿದ್ದಾರೆ. ಟ್ವೀಟರ್‌ನಲ್ಲಿ 29.4 ಮಿಲಿಯನ್‌ (2.94 ಕೋಟಿ) ಹಾಗೂ ಇನ್‌ಸ್ಟಾಗ್ರಾಂನಲ್ಲಿ 33.5 ಮಿಲಿಯನ್‌ (3.35 ಕೋಟಿ) ಹಿಂಬಾಲಕರನ್ನು ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ ತಮ್ಮ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಜತೆ ಕ್ಲಿಕ್ಕಿಸಿಕೊಂಡ ಫೋಟೋಗಳಿಗೆ ಅತಿಹೆಚ್ಚು ಲೈಕ್ಸ್‌ ಹಾಗೂ ಕಾಮೆಂಟ್‌ಗಳು ದಾಖಲಾಗುತ್ತವೆ ಎಂದು ಸಾಮಾಜಿಕ ತಾಣಗಳ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಕೊಹ್ಲಿ ಸ್ಲೋ ಪಾಯ್ಸನ್ ಎಂದ ಟೀಂ ಇಂಡಿಯಾ ಮಾಜಿ ಕೋಚ್!

ಕ್ರಿಕೆಟ್ ಜೊತೆಗೆ  ಕೊಹ್ಲಿ ಸಾಮಾಜಿಕ ಜಾಲತಾಣದಲ್ಲೂ ಸಕ್ರಿಯರಾಗಿದ್ದಾರೆ. ಸದ್ಯ ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಲಿ, ಮೇ.22 ರಂದು ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾ ಜೊತೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಮೇ.30 ರಿಂದ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. 

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.