ಕಾನ್ಪುರ್(ಸೆ.20): ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿ, ಗೌರವ ವಂದನೆ ಸಲ್ಲಿಸಿದ್ದಾರೆ.
ಜಮ್ಮು ಕಾಶ್ಮೀರದ ಉರಿ ಪ್ರದೇಶದ ಭಾರತೀಯ ಸೇನಾ ಶಿಬಿರದ ಮೇಲೆ ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ ಒಟ್ಟು 20 ಯೋಧರು ಹುತಾತ್ಮರಾಗಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಕೊಹ್ಲಿ, 'ಈ ಫೋಟೋ ನೋಡಿ ನಾನು ಭಾವೋದ್ವೇಗಕ್ಕೆ ಒಳಗಾಗಿದ್ದೇನೆ. ಧೈರ್ಯಶಾಲಿ ಯೋಧರ ತ್ಯಾಗವನ್ನು ಹೇಗೆ ಬಣ್ಣಿಸಬೇಕೆಂದು ತಿಳಿಯುತ್ತಿಲ್ಲ. 'ಜೈ ಹಿಂದ್' ಎಂದು ಟ್ವೀಟ್ ಮಾಡಿದ್ದಾರೆ.
