ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ, ನವದೆಹಲಿಯಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಯಭೇರಿ ಇಲ್ಲವೇ ಡ್ರಾ ಸಾಧಿಸಿದರೆ ಸತತ 9ನೇ ಟೆಸ್ಟ್ ಸರಣಿ ಗೆಲುವು ಕಾಣಲಿದೆ.
ನವದೆಹಲಿ(ನ.30): ಸತತ 9ನೇ ಟೆಸ್ಟ್ ಸರಣಿ ಗೆಲ್ಲಲು ತುದಿಗಾಲಿನಲ್ಲಿ ನಿಂತಿರುವ ಟೀಂ ಇಂಡಿಯಾ ವಿಶ್ವದಾಖಲೆ ಸರಿಗಟ್ಟಲು ಎದುರು ನೋಡುತ್ತಿದೆ.
ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ, ನವದೆಹಲಿಯಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಯಭೇರಿ ಇಲ್ಲವೇ ಡ್ರಾ ಸಾಧಿಸಿದರೆ ಸತತ 9ನೇ ಟೆಸ್ಟ್ ಸರಣಿ ಗೆಲುವು ಕಾಣಲಿದೆ. ಈ ಮೂಲಕ 2005ರಿಂದ 2008ರವರೆಗೆ ಸತತ 9 ಸರಣಿ ಗೆಲುವು ಕಂಡಿದ್ದ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿರುವ ದಾಖಲೆಯನ್ನು ಟೀಂ ಇಂಡಿಯಾ ಸರಿಗಟ್ಟಲಿದೆ. ಭಾರತ ತಂಡ ಈಗಾಗಲೇ ಸತತ 8 ಟೆಸ್ಟ್ ಸರಣಿ ಗೆಲುವು ದಾಖಲಿಸಿದೆ.
ಮುಂಬರುವ ಸರಣಿ ವೇಳೆಗೆ ಟೀಂ ಇಂಡಿಯಾ ವೇಗದ ಬೌಲಿಂಗ್ ಪಡೆಯನ್ನು ಇನ್ನಷ್ಟು ಬಲಿಷ್ಠ ಪಡಿಸಿಕೊಂಡರೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ವಿರಾಟ್ ಪಡೆ ಸತತ 10ನೇ ಸರಣಿ ಗೆಲುವು ದಾಖಲಿಸುವ ಮೂಲಕ ಹೊಸ ವಿಶ್ವದಾಖಲೆ ಬರೆಯಬಹುದು. ಶ್ರೀಲಂಕಾ ಸರಣಿ ಮುಕ್ತಾಯದ ಬಳಿಕ ಟೀಂ ಇಂಡಿಯಾವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ವಿರಾಟ್ ಪಡೆಗೆ ಕಠಿಣ ಸವಾಲು ಎದುರಾಗಲಿದೆ.
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಇನಿಂಗ್ಸ್ ಹಾಗೂ 239ರನ್'ಗಳ ಭರ್ಜರಿ ಜಯ ದಾಖಲಿಸಿತ್ತು. ಸರಣಿಯ ಅಂತಿಮ ಪಂದ್ಯ ಡಿಸೆಂಬರ್ 2ರಿಂದ ಆರಂಭವಾಗಲಿದೆ.
