ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ 22 ರನ್’ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆ ಬಳಿಕ ನಾಯಕ ವಿರಾಟ್ ಕೊಹ್ಲಿ[47] ಹಾಗೂ ರೈನಾ[27] ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
ಕಾರ್ಡಿಫ್[ಜು.06]: ನಾಯಕ ವಿರಾಟ್ ಕೊಹ್ಲಿ[47] ಹಾಗೂ ಮಾಜಿ ನಾಯಕ ಎಂ.ಎಸ್. ಧೋನಿ[32*] ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್’ಗೆ ಗೆಲ್ಲಲು 149 ರನ್’ಗಳ ಸಾಧಾರಣ ಗುರಿ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ 22 ರನ್’ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆ ಬಳಿಕ ನಾಯಕ ವಿರಾಟ್ ಕೊಹ್ಲಿ[47] ಹಾಗೂ ರೈನಾ[27] ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಧೋನಿ ಕೇವಲ 24 ಎಸೆತಗಳಲ್ಲಿ 32 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು.
ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದ ರಾಹುಲ್ ಕೇವಲ 6 ರನ್ ಬಾರಿಸಿ ಫ್ಲಂಕೆಟ್’ಗೆ ವಿಕೆಟ್ ಒಪ್ಪಿಸಿದರು. ಇಂಗ್ಲೆಂಡ್ ಪರ ಫ್ಲಂಕೆಟ್, ವಿಲ್ಲಿ, ಜಾಕ್ ಬಾಲ್ ಹಾಗೂ ಆದಿಲ್ ರಶೀದ್ ತಲಾ ಒಂದೊಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಭಾರತ: 148/5
ಕೊಹ್ಲಿ: 47
ಫ್ಲಂಕೆಟ್: 17/1
[* ವಿವರ ಅಪೂರ್ಣ]

Last Updated 6, Jul 2018, 11:51 PM IST