ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಕಿಂಗ್ ಕೊಹ್ಲಿ..!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 12, Jan 2019, 3:37 PM IST
Virat Kohli reveals retirement plan
Highlights

‘ಕಳೆದ 5 ವರ್ಷಗಳಲ್ಲಿ ಸಾಕಷ್ಟು ಕ್ರಿಕೆಟ್‌ ಆಡಿದ್ದೇನೆ. ನಿವೃತ್ತಿ ಯಾವಾಗ ಪಡೆಯುತ್ತೇನೆ ಎಂದು ಗೊತ್ತಿಲ್ಲ. ಆದರೆ ನಿವೃತ್ತಿಯ ಬಳಿಕ ಮತ್ತೆ ಬ್ಯಾಟ್‌ ಹಿಡಿಯುವುದಿಲ್ಲ’ ಎಂದರು.

ಸಿಡ್ನಿ(ಜ.12): ಬ್ರೆಂಡನ ಮೆಕಲ್ಲಮ್‌ ಮತ್ತು ಎಬಿ ಡಿ ವಿಲಿಯ​ರ್ಸ್’ರಂತಹ ದಿಗ್ಗಜ ಕ್ರಿಕೆಟಿಗರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಬಳಿಕವೂ ಫ್ರಾಂಚೈಸಿ ಟಿ20 ಲೀಗ್‌ಗಳಲ್ಲಿ ಆಡುತ್ತಿದ್ದಾರೆ. ಆದರೆ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ,‘ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಮತ್ತೆ ಬ್ಯಾಟ್‌ ಹಿಡಿಯುವುದಿಲ್ಲ’ ಎಂದು ಹೇಳಿದ್ದಾರೆ. 

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಸ್ಪ್ರೇಲಿಯಾದ ಪತ್ರಕರ್ತರೊಬ್ಬರು ನಿವೃತ್ತಿ ಬಳಿಕ ಬಿಗ್‌ಬ್ಯಾಶ್‌ ಲೀಗ್‌ನಲ್ಲಿ ಆಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ‘ಕಳೆದ 5 ವರ್ಷಗಳಲ್ಲಿ ಸಾಕಷ್ಟು ಕ್ರಿಕೆಟ್‌ ಆಡಿದ್ದೇನೆ. ನಿವೃತ್ತಿ ಯಾವಾಗ ಪಡೆಯುತ್ತೇನೆ ಎಂದು ಗೊತ್ತಿಲ್ಲ. ಆದರೆ ನಿವೃತ್ತಿಯ ಬಳಿಕ ಮತ್ತೆ ಬ್ಯಾಟ್‌ ಹಿಡಿಯುವುದಿಲ್ಲ’ ಎಂದರು.

ವಿರಾಟ್ ಕೊಹ್ಲಿ ಆಸಿಸ್ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿದ ಏಷ್ಯಾದ ಮೊದಲ ನಾಯಕ ಎನ್ನುವ ಇತಿಹಾಸ ಬರೆದಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಭಾರತ 2-1 ಅಂತರದಲ್ಲಿ ಗೆದ್ದುಕೊಂಡಿತ್ತು.

loader