ಸತತ ಸೋಲು, ಹೀನಾಯ ಪ್ರದರ್ಶನ, ಇಂಗ್ಲೆಂಡ್ ಪಿಚ್‌ನಲ್ಲಿ ಮುಖಭಂಗಗಳಿಂದ ಬೇಸತ್ತಿರುವ ಟೀಂ ಇಂಡಿಯಾ ಅಭಿಮಾನಿಗಳು ಕೊಹ್ಲಿ ಸೈನ್ಯದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಾಯಕ ವಿರಾಟ್ ಕೊಹ್ಲಿಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.

ಲಂಡನ್(ಆ.14): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 0-2 ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಟೀಕೆಗೆ ಗುರಿಯಾಗಿದೆ. ಲಾರ್ಡ್ಸ್ ಟೆಸ್ಟ್ ಪಂದ್ಯ ಕಳಪೆ ಪ್ರದರ್ಶನ, ಹೀನಾಯ ಸೋಲು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇಷ್ಟೇ ಅಲ್ಲ ತಂಡದಲ್ಲಿ ಬದಲಾವಣೆ ತರಲು ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ನಾಯಕ ವಿರಾಟ್ ಕೊಹ್ಲಿ ಇದೀಗ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ ನೀಡಿದ್ದಾರೆ. ಮೊದಲೇ ಸೋಲಿನ ನೋವಿನಲ್ಲಿರುವ ಕೊಹ್ಲಿ ಇದೀಗ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

ಕೆಲ ಪಂದ್ಯದಲ್ಲಿ ನಾವು ಗೆಲುವು ಸಾಧಿಸುತ್ತೇವೆ, ಕೆಲ ಪಂದ್ಯದಲ್ಲಿ ನಾವು ಪಾಠ ಕಲಿಯುತ್ತೇವೆ. ನೀವು ನಮ್ಮ ಕೈಬಿಡದಿರಿ. ನಾವು ಖಂಡಿತವಾಗಿಯೂ ಪಂದ್ಯವನ್ನ ಬಿಟ್ಟುಕೊಡುವುದಿಲ್ಲ ಎಂದು ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸಿದ್ದಾರೆ.

ಸೋಲಿನ ಬಳಿಕ ಇದೀಗ 3ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಟ್ರೆಂಟ್‌ಬ್ರಿಡ್ಜ್ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ. ಹೀಗಾಗಿ ಆಂಗ್ಲರಿಗೆ ತಿರುಗೇಟು ನೀಡೋ ವಿಶ್ವಾಸದಲ್ಲಿರುವ ಕೊಹ್ಲಿ ಇದೀಗ ಅಭಿಮಾನಿಗಳಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.