ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ 31ನೇ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್'ನಲ್ಲಿ ಅತಿಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟರು.
ಮುಂಬೈ(ಅ.22): ನಾಯಕ ವಿರಾಟ್ ಕೊಹ್ಲಿಯ ಸಮಯೋಚಿತ ಶತಕದ ನೆರವಿನಿಂದ ಟೀಂ ಇಂಡಿಯಾ 280 ರನ್'ಗಳ ಸವಾಲಿನ ಮೊತ್ತ ಕಲೆ ಹಾಕಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಆರಂಭ ಅಷ್ಟೇನು ಉತ್ತಮವಾಗಿರಲಿಲ್ಲ. ಮೊದಲ 29 ರನ್'ಗಳಾಗುವಷ್ಟರಲ್ಲೇ ಆರಂಭಿಕರಿಬ್ಬರೂ ಪೆವಿಲಿಯನ್ ಹಾದಿ ಸೇರಿದ್ದರು. ಆ ಬಳಿಕ ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟ್ಸ್'ಮನ್'ಗಳೊಂದಿಗೆ ಇನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ತಾವಾಡಿದ 200ನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಸ್ಮರಣೀಯವಾಗಿಸಿಕೊಂಡರು. ಕೊಹ್ಲಿಗೆ ದಿನೇಶ್ ಕಾರ್ತಿಕ್(37) ಹಾಗೂ ಧೋನಿ(25) ಉತ್ತಮ ಸಾಥ್ ನೀಡಿದರು.
ನ್ಯೂಜಿಲೆಂಡ್ ಪರ ವೇಗಿ ಟ್ರೆಂಟ್ ಬೌಲ್ಟ್ 4 ವಿಕೆಟ್ ಪಡೆದು ಮಿಂಚಿದರು.
ಪಾಂಟಿಂಗ್ ರೆಕಾರ್ಡ್ ಉಡೀಸ್: ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ 31ನೇ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್'ನಲ್ಲಿ ಅತಿಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟರು. ಅಲ್ಲದೇ ಮೊದಲು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವಿರಾಟ್ ಯಶಸ್ವಿಯಾದರು. ಇನ್ನು 49 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಸಂಕ್ಷಿಪ್ತ ಸ್ಕೋರ್:
ಭಾರತ: 280/8
ವಿರಾಟ್ ಕೊಹ್ಲಿ: 121
ದಿನೇಶ್ ಕಾರ್ತಿಕ್: 37
ಟ್ರೆಂಟ್ ಬೌಲ್ಟ್: 35/4
ವಿವರ ಅಪೂರ್ಣ
