ಏಪ್ರಿಲ್ 5ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಲಿ ಚಾಂಪಿಯನ್ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೆಣಸಲಿದೆ.

ಬೆಂಗಳೂರು(ಮಾ.28): ಭುಜದ ನೋವಿನಿಂದ ಬಳಲುತ್ತಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸದ್ಯದಲ್ಲೇ ಶುರುವಾಗಲಿರುವ ಹತ್ತನೇ ಐಪಿಎಲ್ ಪಂದ್ಯಾವಳಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ.

ಆಸೀಸ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಈ ಸುಳಿವನ್ನು ಸ್ವತಃ ಕೊಹ್ಲಿಯೇ ನೀಡಿದ್ದಾರೆ. ‘‘ಶೇ. 100ರಷ್ಟು ದೈಹಿಕವಾಗಿ ನಾನು ಫಿಟ್ ಆಗಲು ಇನ್ನೂ ಕೆಲವು ವಾರಗಳು ಬೇಕಾಗಬಹುದು’’ ಎಂದು ಕೊಹ್ಲಿ ತಿಳಿಸಿದ್ದಾರೆ.

ಅಂದಹಾಗೆ ಏಪ್ರಿಲ್ 5ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಲಿ ಚಾಂಪಿಯನ್ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೆಣಸಲಿದೆ.

ಐಪಿಎಲ್ 2016ರ ಐಪಿಎಲ್‌'ನಲ್ಲಿ ಕೊಹ್ಲಿ ಆಡಿದ 16 ಪಂದ್ಯಗಳಲ್ಲಿ ನಾಲ್ಕು ಶತಕ ಮತ್ತು ಏಳು ಅರ್ಧಶತಕ ಸೇರಿದಂತೆ 973 ರನ್ ಗಳಿಸಿದ್ದರು. ರಾಂಚಿ ಟೆಸ್ಟ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಕೊಹ್ಲಿ, ಧರ್ಮಶಾಲಾ ಟೆಸ್ಟ್‌ನಿಂದ ವಂಚಿತರಾಗಿದ್ದರು.