ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದ್ದು ಅಕ್ಷರ್ ಪಟೇಲ್ ಬದಲಿಗೆ ಕುಲ್ದೀಪ್ ಯಾದವ್ ಹಾಗೂ ರಹಾನೆ ಬದಲಿಗೆ ಶಿಖರ್ ಧವನ್ ಸ್ಥಾನ ಪಡೆದಿದ್ದಾರೆ.
ರಾಂಚಿ(ಅ.07): ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದ್ದು ಅಕ್ಷರ್ ಪಟೇಲ್ ಬದಲಿಗೆ ಕುಲ್ದೀಪ್ ಯಾದವ್ ಹಾಗೂ ರಹಾನೆ ಬದಲಿಗೆ ಶಿಖರ್ ಧವನ್ ಸ್ಥಾನ ಪಡೆದಿದ್ದಾರೆ.
ವೈಯುಕ್ತಿಕ ಕಾರಣಗಳಿಂದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದ್ದಿದ್ದ ಗಬ್ಬರ್ ಸಿಂಗ್ ಖ್ಯಾತಿಯ ಎಡಗೈ ಬ್ಯಾಟ್ಸ್'ಮನ್ ಶಿಖರ್ ಧವನ್ ಟಿ20 ಪಂದ್ಯಕ್ಕೆ ತಂಡ ಕೂಡಿಕೊಂಡಿದ್ದಾರೆ. ಮನೀಶ್ ಪಾಂಡೆ ಕೂಡಾ ತಂಡದಲ್ಲಿ ಸ್ಥಾನ ಪಡೆದಿದ್ದು, ಯಾವ ರೀತಿಯ ಪ್ರದರ್ಶನ ತೋರುತ್ತಾರೆಂದು ಕಾದು ನೋಡಬೇ
ಮೂರು ಪಂದ್ಯದಲ್ಲಿ ಮೊದಲ ಪಂದ್ಯದಲ್ಲೇ ಗೆದ್ದು ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ..