ಈಗಾಗಲೇ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳಿಗೆ ಈ ಪಂದ್ಯವನ್ನು ಜಯಿಸುವ ಮೂಲಕ ಸರಣಿ ಗೆಲ್ಲುವ ಅವಕಾಶವಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು ದೀಪಕ್ ಚಾಹರ್ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದಿದ್ದು, ಕುಲ್ದೀಪ್ ಹಾಗೂ ಭುವನೇಶ್ವರ್ ಕುಮಾರ್’ಗೆ ವಿಶ್ರಾಂತಿ ನೀಡಲಾಗಿದೆ.
ಬ್ರಿಸ್ಟಾಲ್[ಜು.08]: ಭಾರತ-ಇಂಗ್ಲೆಂಡ್ ನಡುವಿನ ತ್ರಿಕೋನ ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ಎರಡು ಹಾಗೂ ಇಂಗ್ಲೆಂಡ್ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.
ಈಗಾಗಲೇ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳಿಗೆ ಈ ಪಂದ್ಯವನ್ನು ಜಯಿಸುವ ಮೂಲಕ ಸರಣಿ ಗೆಲ್ಲುವ ಅವಕಾಶವಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು ದೀಪಕ್ ಚಾಹರ್ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದಿದ್ದು, ಕುಲ್ದೀಪ್ ಹಾಗೂ ಭುವನೇಶ್ವರ್ ಕುಮಾರ್’ಗೆ ವಿಶ್ರಾಂತಿ ನೀಡಲಾಗಿದೆ.
ಇನ್ನು ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಜೋ ರೂಟ್ ಬದಲಿಗೆ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.
ಟಾಸ್ ಕುರಿತು ಸುವರ್ಣನ್ಯೂಸ್ ವಿಶ್ಲೇಷಣೆ ನಿಮ್ಮ ಮುಂದೆ...