ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕೊಹ್ಲಿ ದಾಖಲೆ

First Published 25, Feb 2018, 5:32 PM IST
Virat New Recort at SA Tour
Highlights

ಇದರೊಂದಿಗೆ ವಿದೇಶಿ ಪ್ರವಾಸದಲ್ಲಿ ಅತಿಹೆಚ್ಚು ರನ್ ಕಲೆಹಾಕಿದ ನಾಯಕರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನ ಪಡೆದರು. 2003ರ ಇಂಗ್ಲೆಂಡ್ ಪ್ರವಾಸದಲ್ಲಿ ಆಫ್ರಿಕಾ ನಾಯಕ ಗ್ರೇಮ್ ಸ್ಮಿತ್ 937 ರನ್ ಗಳಿಸಿ ದಾಖಲೆ ಬರೆದಿದ್ದರು.

ಆಫ್ರಿಕಾದಲ್ಲಿ ಕೊಹ್ಲಿ 871 ರನ್ ದ.ಆಫ್ರಿಕಾ ಪ್ರವಾಸವನ್ನು ವಿರಾಟ್ ಕೊಹ್ಲಿ 871 ರನ್'ಗಳೊಂದಿಗೆ ಮುಕ್ತಾಯಗೊಳಿಸಿದರು. ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ವಿರಾಟ್, ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಮಂಕಾದರು.

ಇದರೊಂದಿಗೆ ವಿದೇಶಿ ಪ್ರವಾಸದಲ್ಲಿ ಅತಿಹೆಚ್ಚು ರನ್ ಕಲೆಹಾಕಿದ ನಾಯಕರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನ ಪಡೆದರು. 2003ರ ಇಂಗ್ಲೆಂಡ್ ಪ್ರವಾಸದಲ್ಲಿ ಆಫ್ರಿಕಾ ನಾಯಕ ಗ್ರೇಮ್ ಸ್ಮಿತ್ 937 ರನ್ ಗಳಿಸಿ ದಾಖಲೆ ಬರೆದಿದ್ದರು.

ಭಾರತೀಯ ನಾಯಕರ ಪೈಕಿ ಕೊಹ್ಲಿ ಮೊದಲ ಸ್ಥಾನಕ್ಕೇರಿದರು. ಈ ಹಿಂದೆ ವಿದೇಶದಲ್ಲಿ ಅತಿಹೆಚ್ಚು ರನ್ ಗಳಿಸಿದ ನಾಯಕ ಎನ್ನುವ ದಾಖಲೆ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ದ್ರಾವಿಡ್ 2006ರ ವಿಂಡೀಸ್ ಪ್ರವಾಸದಲ್ಲಿ 645 ರನ್ ಗಳಿಸಿದ್ದರು.

loader