ನವದೆಹಲಿ[ಏ.13]: ಬಹುನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಈ ಕ್ರೀಡಾ ಮಹಾಸಂಗ್ರಾಮಕ್ಕೆ ತಮ್ಮ ಕನಸಿನ ಟೀಂ ಇಂಡಿಯಾವನ್ನು ಪ್ರಕಟಿಸಿದ್ದಾರೆ. 

ವಿಶ್ವಕಪ್ 2019: ಏ.15ಕ್ಕೆ ಟೀಂ ಇಂಡಿಯಾ ಪ್ರಕಟ!

ಟೀಂ ಇಂಡಿಯಾ ಆಯ್ಕೆ ಸಮಿತಿ ಇದೇ ಏಪ್ರಿಲ್ 15ರಂದು ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿರುವ ವಿರಾಟ್ ಪಡೆಯಲ್ಲಿ ಯಾರೆಲ್ಲಾ ಸ್ಥಾನ ಪಡೆಯಬಹುದು ಎನ್ನುವ ಕುತೂಹಲವೂ ಜೋರಾಗಿದೆ. ಟೀಂ ಇಂಡಿಯಾ ಅಧಿಕೃತ ತನ್ನ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸುವ ಮುನ್ನವೇ, ಸ್ಫೋಟಕ ಬ್ಯಾಟ್ಸ್’ಮನ್ ವಿರೇಂದ್ರ ಸೆಹ್ವಾಗ್ ವಿಶ್ವಕಪ್’ಗೆ 15 ಆಟಗಾರ ತಂಡವನ್ನು ಪ್ರಕಟಿಸಿದ್ದಾರೆ. ಈ ತಂಡದಲ್ಲಿ 2015ರ ಏಕದಿನ ವಿಶ್ವಕಪ್ ಪ್ರತಿನಿಧಿಸಿದ್ದ 7 ಆಟಗಾರರಿಗೆ ಸ್ಥಾನ ಕಲ್ಪಿಸಿದ್ದು, 8 ಹೊಸ ಆಟಗಾರರು ತಂಡದಲ್ಲಿದ್ದಾರೆ. ವಿರೇಂದ್ರ ಸೆಹ್ವಾಗ್ 2015ರ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ್ದವರ ಪಟ್ಟಿಯನ್ನು ಹಾಗೂ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ತಮ್ಮ ತಂಡವನ್ನು ಪ್ರಕಟಿಸಿದ್ದಾರೆ. 

2019ರ ವಿಶ್ವಕಪ್ ಟೂರ್ನಿಗೆ ಭಾರತದ ಕನಸಿನ ತಂಡ ಹೀಗಿದೆ:

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಎಂ.ಎಸ್ ಧೋನಿ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಕೇದಾರ್ ಜಾಧವ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಲ್, ವಿಜಯ್ ಶಂಕರ್, ರಿಷಭ್ ಪಂತ್.

ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಪ್ರಕಟಿಸಿದ ನ್ಯೂಜಿಲೆಂಡ್

2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಇನ್ನು ಪಾಕಿಸ್ತಾನ ವಿರುದ್ಧ ಜೂನ್ 16ರಂದು ಭಾರತ ಕಾದಾಡಲಿದೆ.