ಮಿಥಾಲಿ ರಾಜ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಇಂಗ್ಲೆಂಡ್ ಎದುರು ರೋಚಕ ಸೋಲು ಕಾಣುವ ಮೂಲಕ ಚೊಚ್ಚಲ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು.
ನವದೆಹಲಿ(ಆ.05): ಭಾರತ ತಂಡದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅವರನ್ನು ಭಾರತದ ವನಿತೆಯರ ಕ್ರಿಕೆಟ್ ತಂಡದ ಆಟಗಾರ್ತಿಯರು ಭೇಟಿಯಾಗಿದ್ದಾರೆ.
ಕಳೆದ ತಿಂಗಳಷ್ಟೇ ಮುಕ್ತಾಯವಾದ ಮಹಿಳೆಯರ ಏಕದಿನ ವಿಶ್ವಕಪ್ ಕಪ್ ಟೂರ್ನಿಯಲ್ಲಿ ಮಿಥಾಲಿ ರಾಜ್ ನೇತೃತ್ವದ ಟೀಂ ಇಂಡಿಯಾ ರನ್ನರ್ ಅಫ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿ ಸೇರಿದಂತೆ ಹರ್ಮನ್'ಪ್ರೀತ್ ಕೌರ್, ವೇದಾ ಕೃಷ್ಣಮೂರ್ತಿ, ಏಕ್ತಾ ಬಿಷ್ತ್, ಪೂನಮ್ ರಾವತ್ ಹಾಗೂ ರಾಜೇಶ್ವರಿ ಗಾಯಕ್ವಾಡ್ ಒಟ್ಟಾಗಿ ಸೆಹ್ವಾಗ್ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಫೋಟೋವನ್ನು ಸೆಹ್ವಾಗ್ ಟ್ವೀಟ್ ಮಾಡಿದ್ದು, ಇದರ ಜೊತೆಗೆ ನಮ್ಮನ್ನು ಹೆಮ್ಮೆಪಡುವಂತೆ ಮಾಡಿದ ಈ ಅದ್ಭುತ ಆಟಗಾರ್ತಿಯರನ್ನು ಭೇಟಿ ಮಾಡಿದ್ದು ಸಂತೋಷವನ್ನುಂಟು ಮಾಡಿದೆ ಎಂದು ಬರೆದುಕೊಂಡಿದ್ದಾರೆ.
ಮಿಥಾಲಿ ರಾಜ್ ನೇತೃತ್ವದ ವನಿತೆಯರ ಟೀಂ ಇಂಡಿಯಾ ಇಂಗ್ಲೆಂಡ್ ಎದುರು ರೋಚಕ ಸೋಲು ಕಾಣುವ ಮೂಲಕ ಚೊಚ್ಚಲ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು.
