ನವದೆಹಲಿ(ಡಿ.11): ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ದ್ವಿಶತಕ ಬಾರಿಸಿದ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸೆಹ್ವಾಗ್, ನರೇಂದ್ರ ಮೋದಿ ಸರ್ಕಾರಕ್ಕೆ 200 ರೂಪಾಯಿ ನೋಟುಗಳನ್ನು ಮುದ್ರಿಸಿ ಎಂದು ಟ್ವಿಟ್ಟರ್'ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿ ಮಿಂಚಿದ ವಿರಾಟ್ ಕೊಹ್ಲಿಯನ್ನು ಕೊಂಡಾಡಿ ಸೆಹ್ವಾಗ್ ಈ ರೀತಿ ಟ್ವೀಟ್ ಮಾಡಿದ್ದಾರೆ.

ಪ್ರಸಕ್ತ ವರ್ಷವೊಂದರಲ್ಲೇ ಮೂರು ದ್ವಿಶತಕ ಬಾರಿಸಿ ಅತ್ಯತ್ತಮ ಫಾರ್ಮ್'ನಲ್ಲಿರುವ ಕೊಹ್ಲಿಯ ಕುರಿತು ಮಾಜಿ ಆರಂಬಿಕ ಆಟಗಾರ ಸೆಹ್ವಾಗ್ ಟ್ವೀಟ್ ಮಾಡಿದ್ದು ಹೀಗೆ...