ನವದೆಹಲಿ(ನ.08): ತಮ್ಮ ಸ್ಪೋಟಕ ಬ್ಯಾಟಿಂಗ್ ಮಾತ್ರವಲ್ಲದೆ ಟ್ವಿಟ್ಟರ್'ನಲ್ಲೂ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ವಿರೇಂದ್ರ ಸೆಹ್ವಾಗ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಾರೆ.

ಕ್ರಿಕೆಟ್'ಗೆ ವಿದಾಯ ಹೇಳಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸೆಹ್ವಾಗ್, ಸಾಕಷ್ಟು ಗಣ್ಯರ ಹುಟ್ಟುಹಬ್ಬಕ್ಕೆ ವಿನೂತವಾಗಿ ಶುಭಕೋರುವ ಮೂಲಕ ಗಮನ ಸೆಳೆಯುತ್ತಿದ್ದಾರೆ.

ಇಂದು 40ನೇ ವಸಂತಕ್ಕೆ ಕಾಲಿಟ್ಟ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೇಟ್ ಲೀ ಹುಟ್ಟುಹಬ್ಬಕ್ಕೆ ವಿನೂತನವಾಗಿ ಶುಭಕೋರುವುದರ ಜೊತೆಗೆ ಆಸೀಸ್ ವೇಗಿಯ ಕಾಲೆಳೆದಿದ್ದಾರೆ.

ಸೆಹ್ವಾಗ್ ಟ್ವೀಟ್'ಗೆ ಅಷ್ಟೇ ಪ್ರೀತಿಯಿಂದ ಪ್ರತಿಕ್ರಿಯಿಸಿರುವ ಬ್ರೇಟ್ ಲೀ ದೆಹಲಿ ಆಟಗಾರನಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.