ಇದು ಧೋನಿ ಅಭಿಮಾನಿಗಳಿಗೆ ಮಾತ್ರ...! MSD ಸಿಡಿಲಬ್ಬರದ ಅರ್ಧಶತಕ ಕಣ್ತುಂಬಿಕೊಳ್ಳಿ

Watch MS Dhoni Some Vintage Shots in 2nd T20I Fifty
Highlights

ಕಳೆದ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ್ದ ಧೋನಿ, ಸೆಂಚೂರಿಯನ್ ಮೈದಾನದಲ್ಲಿ ಎರಡನೇ ಅರ್ಧಶತಕ ಸಿಡಿಸಿದರು. ಕೇವಲ 28 ಎಸೆತಗಳನ್ನು ಎದುರಿಸಿದ ಧೋನಿ 4 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಅರ್ಧ ಶತಕ ಪೂರೈಸಿದರು.

ಮಹೇಂದ್ರ ಸಿಂಗ್ ಧೋನಿ ಹರಿಣಗಳೆದುರು ಎರಡನೇ ಟಿ20 ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸುವ ಮೂಲಕ ಅವರ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದ್ದಾರೆ. ಟೀಂ ಇಂಡಿಯಾಗೆ 2007ರ ಚೊಚ್ಚಲ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಧೋನಿ ಟಿ20ಯಲ್ಲಿ ಎರಡನೇ ಅರ್ಧಶತಕ ಸಿಡಿಸಿದರು. ಕಳೆದ ವರ್ಷ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ್ದ ಧೋನಿ, ಸೆಂಚೂರಿಯನ್ ಮೈದಾನದಲ್ಲಿ ಎರಡನೇ ಅರ್ಧಶತಕ ಸಿಡಿಸಿದರು. ಕೇವಲ 28 ಎಸೆತಗಳನ್ನು ಎದುರಿಸಿದ ಧೋನಿ 4 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಅರ್ಧ ಶತಕ ಪೂರೈಸಿದರು.

ಹೀಗಿತ್ತು ಧೋನಿ ಆರ್ಭಟ: ವಿಡಿಯೋ ಕೃಪೆ: ಸೋನಿ ಸಿಕ್ಸ್

loader