ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸುವುದು ನಿಜಕ್ಕೂ ಒಂದು ಸಾಧನೆಯೇ ಸರಿ. ಬೌಲಿಂಗ್ ಹಾಗೂ ಬ್ಯಾಟಿಂಗ್'ನಲ್ಲಿ ಸಂಘಟಿತ ಪ್ರದರ್ಶನ ತೋರಿದರೆ ಗೆಲುವು ಕಷ್ಟವೇನಲ್ಲ ಎಂದು ಆಸೀಸ್ ಆರಂಭಿಕ ಆಟಗಾರ ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರು(ಮಾ.05): ಬಾರ್ಡರ್-ಗವಾಸ್ಕರ್ ಟೂರ್ನಿಯಲ್ಲಿ ನಿರಾಸದಾಯಕ ಪ್ರದರ್ಶನ ತೋರಿದ ಹೊರತಾಗಿಯೂ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುವುದಾಗಿ ಸನ್'ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಲಿ ಚಾಂಪಿಯನ್ ತಂಡದ ಮೇಲೆ ಸಹಜವಾಗಿಯೇ ಸಾಕಷ್ಟು ನಿರೀಕ್ಷೆಗಳಿರುತ್ತವೆ. ಕಳೆದ ಬಾರಿಯ ಟೂರ್ನಿಯಲ್ಲಿನ ತೋರಿದ ಪ್ರದರ್ಶನದಿಂದ ಈ ಬಾರಿಯೂ ಸಾಕಷ್ಟು ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದ್ದು, ಮತ್ತೊಮ್ಮೆ ಸೈನ್'ರೈಸರ್ಸ್ ಹೈದರಾಬಾದ್ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂದು ವಾರ್ನರ್ ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸುವುದು ನಿಜಕ್ಕೂ ಒಂದು ಸಾಧನೆಯೇ ಸರಿ. ಬೌಲಿಂಗ್ ಹಾಗೂ ಬ್ಯಾಟಿಂಗ್'ನಲ್ಲಿ ಸಂಘಟಿತ ಪ್ರದರ್ಶನ ತೋರಿದರೆ ಗೆಲುವು ಕಷ್ಟವೇನಲ್ಲ ಎಂದು ಆಸೀಸ್ ಆರಂಭಿಕ ಆಟಗಾರ ಅಭಿಪ್ರಾಯ ಪಟ್ಟಿದ್ದಾರೆ.

ಐಪಿಎಲ್ 10ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಸನ್'ರೈಸರ್ ಹೈದರಾಬಾದ್ ತಂಡ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.