ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಏಕದಿನ ಕ್ರಿಕೆಟ್ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಸ್ಫೋಟಕ ಬ್ಯಾಟ್ಸ್‌ಮನ್ ನಿವೃತ್ತಿ ನಿರ್ಧಾರವನ್ನ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಅಧಿಕೃತ ಟ್ವಿಟರ್ ಖಾತೆ ಮೂಲಕ ಬಹಿರಂಗ ಪಡಿಸಿದೆ.
ಜಮೈಕ(ಫೆ.18): ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. 2019ರ ವಿಶ್ವಕಪ್ ಟೂರ್ನಿ ಬಳಿಕ ಗೇಲ್ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ವಿಶ್ವಕಪ್‌ಗೂ ಮುನ್ನ ಇಂಗ್ಲೆಂಡ್ ವಿರುದ್ದದ ಆರಂಭಿಕ 2 ಏಕದಿನ ಸರಣಿಗೆ ಕ್ರಿಸ್ ಗೇಲ್‌ರನ್ನು ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಗೇಲ್ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಯಜುವೇಂದ್ರ ಚಹಾಲ್ ಕಾಲೆಳೆದ ಕ್ರಿಸ್ ಗೇಲ್!
ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಹಾಗೂ ಕ್ರಿಕೆಟಿಗರ ನಡುವಿನ ಹಗ್ಗ ಜಗ್ಗಾಟದಿಂದ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಹೀಗಾಗಿ ಐಪಿಎಲ್ ಟೂರ್ನಿ ಸೇರಿದಂತೆ ಇತರ ದೇಶಗಳ ಟಿ20 ಲೀಗ್ ಟೂರ್ನಿಗಳಲ್ಲಿ ಸಕ್ರೀಯರಾಗಿದ್ದಾರೆ. ಇದೀಗ 2019ರ ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೆ ಗೇಲ್ ಆಯ್ಕೆಯಾಗಿದ್ದಾರೆ. 39 ವರ್ಷದ ಕ್ರಿಸ್ ಗೇಲ್ ಏಕದಿನದಿಂದ ನಿವೃತ್ತಿಯಾಗಲಿದ್ದಾರೆ. ಆದರೆ ಚುಟುಕು ಕ್ರಿಕೆಟ್‌ನಲ್ಲಿ ಮುಂದವರಿಯಲಿದ್ದಾರೆ.
ಇದನ್ನೂ ಓದಿ: ಗ್ರೇಟ್ ಎನಿಸಿಕೊಂಡ ಕ್ರಿಸ್ ಗೇಲ್: ಅಷ್ಟಕ್ಕೂ ಸ್ಫೋಟಕ ಬ್ಯಾಟ್ಸ್’ಮನ್ ಮಾಡಿದ್ದೇನು..?
2015ರ ವಿಶ್ವಕಪ್ ಟೂರ್ನಿಯಲ್ಲಿ ಜಿಂಬಾಬ್ವೆ ವಿರುದ್ದ ದ್ವಿಶತಕ ಸಿಡಿಸಿ ಮಿಂಚಿದ್ದರು. 215 ರನ್ ಸಿಡಿಸೋ ಮೂಲಕ ಏಕದಿನದಲ್ಲಿ ಗರಿಷ್ಠ ರನ್ ಸಿಡಿಸಿದ ವಿಂಡೀಸ್ ಬ್ಯಾಟ್ಸ್‌ಮನ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕಳೆದ ವರ್ಷ ಗೇಲ್, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 476 ಸಿಕ್ಸರ್ ಸಿಡಿಸೋ ಮೂಲಕ ಪಾಕಿಸ್ತಾನದ ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ್ದರು.ಏಕದಿನ ಕ್ರಿಕೆಟ್‌ನಲ್ಲಿ ಗೇಲ್ 9727ರನ್ ಸಿಡಿಸಿದ್ದಾರೆ. ಈ ಮೂಲಕ ಏಕದಿನದಲ್ಲಿ ಗರಿಷ್ಠ ರನ್ ಸಿಡಿಸಿದ ವೆಸ್ಟ್ಇಂಡೀಸ್‌ನ 2ನೇ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದಾರೆ. ಮೊದಲ ಸ್ಥಾನವನ್ನು ಬ್ರಿಯಾನ್ ಲಾರ ಅಲಂಕರಿಸಿದ್ದಾರೆ. ಲಾರ 10,405 ರನ್ ಸಿಡಿಸಿದ್ದಾರೆ.
ಇದನ್ನೂ ಓದಿ: ಕೆನಾಡ ಟಿ20 ಲೀಗ್‌ಗಿಂತಲೂ ಜನಪ್ರೀಯವಾಯಿತು ಕ್ರಿಸ್ ಗೇಲ್ ಕ್ಯಾಚ್!
ಏಕದಿನಲ್ಲಿ ಗೇಲ್ 284 ಪಂದ್ಯ ಆಡಿದ್ದಾರೆ. ಈ ಮೂಲಕ 23 ಶತಕ, 1 ದ್ವಿಶತಕ ಹಾಗೂ 49 ಅರ್ಧಶತಕ ಸಿಡಿಸಿದ್ದಾರೆ. ಇನ್ನು 165 ವಿಕೆಟ್ ಕಬಳಿಸೋ ಮೂಲಕ ಬೌಲಿಂಗ್‍ನಲ್ಲೂ ಮಿಂಚಿದ್ದಾರೆ. ವಿದಾಯದ ಬಳಿಕ ಗೇಲ್ ಸ್ಥಾನ ತುಂಬಬಲ್ಲ ಮತ್ತೊಬ್ಬ ಬ್ಯಾಟ್ಸ್‌ಮನ್ ವೆಸ್ಟ್ ಇಂಡೀಸ್ ಮಾತ್ರವಲ್ಲ, ವಿಶ್ವ ಕ್ರಿಕೆಟ್‌ನಲ್ಲೇ ಇಲ್ಲ.
