ಟೀಂ ಇಂಡಿಯಾ ನೂತನ ವೇಳಾ ಪಟ್ಟಿ ಬಿಡುಗಡೆಯಾಗಿದೆ. ಹೊಸ ವೇಳಾ ಪಟ್ಟಿ ಪ್ರಕಾರ, ಇಂಗ್ಲೆಂಡ್ ಪ್ರವಾಸ ಮುಗಿಸಿ ತವರಿಗೆ ವಾಪಾಸ್ಸಾಗುವ ಟೀಂ ಇಂಡಿಯಾ , ವೆಸ್ಟ್ಇಂಡೀಸ್ ವಿರುದ್ಧ ಸರಣಿ ಆಡಲಿದೆ. ಇಲ್ಲಿದೆ ಭಾರತ-ವೆಸ್ಟ್ಇಂಡೀಸ್ ನಡುವಿನ ಸರಣಿ ವೇಳಾಪಟ್ಟಿ.

ನವದೆಹಲಿ(ಆ.26): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸದ್ಯ ಟೆಸ್ಟ್ ಸರಣಿಯಲ್ಲಿ ತೊಡಗಿಸಿಕೊಂಡಿದೆ. 1-2 ಅಂತರದ ಹಿನ್ನಡೆಯಲ್ಲಿರುವ ಟೀಂ ಇಂಡಿಯಾ ಇದೀಗ 4 ನೇ ಟೆಸ್ಟ್ ಪಂದ್ಯ ಗೆದ್ದು ಸರಣಿ ಸಮಭಲ ಮಾಡಲು ಹಾತೊರೆಯುತ್ತಿದೆ.

ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ಸೆಪ್ಟೆಂಬರ್ 11 ರಂದು ಮುಕ್ತಾಯಗೊಳ್ಳಲಿದೆ. ಬಳಿಕ ತವರಿಗೆ ವಾಪಾಸ್ಸಾಗಲಿರುವ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ವಿರುದ್ದದ ಸರಣಿ ಆಡಲಿದೆ.

ವೆಸ್ಟ್‌ಇಂಡೀಸ್ ತಂಡ ಅಕ್ಟೋಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, ಭಾರತ ವಿರುದಟಛಿ 2 ಟೆಸ್ಟ್, 5 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಾಲಿದೆ. ಜತೆಗೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಹಗಲು-ರಾತ್ರಿಯ ಟೆಸ್ಟ್ ಪಂದ್ಯಗಳನ್ನು ಆಯೋಜಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದೇ ವೇಳೆ 2019ರ ಏಕದಿನ ವಿಶ್ವಕಪ್ ಬಳಿಕ ಫ್ಲಾರಿಡಾದಲ್ಲಿ ವಿಂಡೀಸ್ ವಿರುದ ಭಾರತ 2 ಟಿ20 ಪಂದ್ಯಗಳ ಸರಣಿ ಆಡುವ ಸಾಧ್ಯತೆ ಇದೆ ಎನ್ನಲಾಗಿದೆ.