ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ, ಕ್ಯಾಪ್ಟನ್ ಕೂಲ್ ಧೋನಿ ಮನೆಗೆ ಭೇಟಿ ನೀಡಿದ್ದಾರೆ.
ರಾಂಚಿ(ಅ.09): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಗಳೊಂದಿಗೆ ಕಳೆದ ಸುಂದರ ಕ್ಷಣಗಳ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್'ನಲ್ಲಿ ಹಂಚಿಕೊಂಡಿದ್ದು, ಅದೀಗ ವೈರಲ್ ಆಗುತ್ತಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ, ಕ್ಯಾಪ್ಟನ್ ಕೂಲ್ ಧೋನಿ ಮನೆಗೆ ಭೇಟಿ ನೀಡಿದ್ದಾರೆ. ಆಗ ಝೀವಾ ಜೊತೆ ಮಾತನಾಡಿದ್ದ ಆ ಕ್ಷಣಗಳನ್ನು ವಿರಾಟ್ ಹಂಚಿಕೊಂಡಿದ್ದಾರೆ. ಆ ಸುಂದರ ಕ್ಷಣಗಳು ಹೇಗಿತ್ತು ಅಂತ ನೀವೇ ಒಮ್ಮೆ ನೋಡಿ...
