ಅತ್ಯುತ್ತಮ ಫಾರ್ಮ್‌ನಲ್ಲಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಕಾಯುವಿಕೆ ಶೀಘ್ರದಲ್ಲೇ ಅಂತ್ಯವಾಗಲಿದೆ. ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ಕಾಯುತ್ತಿರುವ ಮಯಾಂಕ್ ಅಗರ್ವಾಲ್ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ಸೇರಿಕೊಳ್ತಾರ? ಇಲ್ಲಿದೆ ವಿವರ.

ಮುಂಬೈ(ಸೆ.16): ರಣಜಿ ಹಾಗೂ ದೇಸಿ ಟೂರ್ನಿಗಳಲ್ಲಿ ಶತಕದ ಮೇಲೆ ಶತಕ ಸಿಡಿಸಿ ಅಬ್ಬರಿಸುತ್ತಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ಶೀಘ್ರದಲ್ಲೇ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಯಾಂಕ್ ಅಗರ್ವಾಲ್ ಆಯ್ಕೆ ಕುರಿತು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿ ಹಾಗೂ ಏಷ್ಯಾಕಪ್ ಟೂರ್ನಿಗೆ ಮಯಾಂಕ್ ಆಗರ್ವಾಲ್ ಆಯ್ಕೆ ಮಾಡದ ಆಯ್ಕೆ ಸಮಿತಿ ವಿರುದ್ದ ಟೀಕೆಗಳು ಕೇಳಿ ಬಂದಿತ್ತು.

ಆಸ್ಟ್ರೇಲಿಯಾ ಎ ಹಾಗೂ ಸೌತ್ಆಫ್ರಿಕಾ ಎ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿರುವ ಮಯಾಂಕ್ ಅಗರ್ವಾಲ್ ಮುಂಬರುವ ವೆಸ್ಟ್ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆಯಾಗೋ ಸಾಧ್ಯತೆ ಇದೆ. ಈ ಕುರಿತು ಎಂ.ಎಸ್.ಕೆ ಪ್ರಸಾದ್ ಸೂಚನೆ ನೀಡಿದ್ದಾರೆ.

ಏಷ್ಯಾಕಪ್ ಸರಣಿ ಬಳಿಕ ಟೀಂ ಇಂಡಿಯಾ ಅಕ್ಟೋಬರ್ 4 ರಿಂದ ವೆಸ್ಟಇಂಡೀಸ್ ವಿರುದ್ದ 2 ಟೆಸ್ಟ್, 5 ಏಕದಿನ ಹಾಗೂ 3 ಟಿ20 ಪಂದ್ಯದ ಸರಣಿ ಆಡಲಿದೆ. ಈ ಟೂರ್ನಿಗೆ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲಿದ್ದಾರೆ.