ಜುಲೈ 9ರ ವರೆಗೂ ಕೋಚ್ ಹುದ್ದೆಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, ಕ್ರಿಕೆಟ್ ಸಲಹಾ ಸಮಿತಿ ಶಿಫಾರಸಿನಂತೆ ಬಿಸಿಸಿಐ ನೂತನ ಕೋಚ್ ಆಯ್ಕೆ ಮಾಡಲಿದೆ.

ಮುಂಬೈ(ಜೂ.25): ಭಾರತ ತಂಡಕ್ಕೆ ಯಶಸ್ಸು ತಂದುಕೊಡುವಂತಹ ಕೋಚ್ ಆಯ್ಕೆ ನಡೆಸಲಾಗುತ್ತದೆ ಎಂದು ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯ ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

ಯಾವ ರೀತಿಯ ಕೋಚ್‌'ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗಂಗೂಲಿ, ‘ಪಂದ್ಯಗಳನ್ನು ಗೆಲ್ಲಿಸಿಕೊಡುವ ಕೋಚ್‌'ಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಉತ್ತರಿಸಿದರು.

ಇದು ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆಯಾದರೆ, ಕೊಹ್ಲಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವ ಹಾಗೂ ನಾಯಕನಿಗೆ ಎಲ್ಲಾ ಅಧಿಕಾರ ನೀಡುವಂತಹ ಕೋಚ್‌'ಗಾಗಿ ಕ್ರಿಕೆಟ್ ಸಲಹಾ ಸಮಿತಿ ಹುಡುಕಾಡುತ್ತಿದೆ ಎಂದು ಕೆಲ ವರದಿಗಳು ತಿಳಿಸಿವೆ.

ಜುಲೈ 9ರ ವರೆಗೂ ಕೋಚ್ ಹುದ್ದೆಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, ಕ್ರಿಕೆಟ್ ಸಲಹಾ ಸಮಿತಿ ಶಿಫಾರಸಿನಂತೆ ಬಿಸಿಸಿಐ ನೂತನ ಕೋಚ್ ಆಯ್ಕೆ ಮಾಡಲಿದೆ.