ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಭಾರತದ ವನಿತೆಯರು ಇದೀಗ ಬದ್ಧವೈರಿ ಪಾಕಿಸ್ತಾನ ವಿರುದ್ಧದ ಹೋರಾಟಕ್ಕೆ ರೆಡಿಯಾಗಿದ್ದಾರೆ. ಈಗಾಗಲೇ ಟಾಸ್ ಪ್ರಕ್ರಿಯೆ ಮುಗಿದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.
ಗಯಾನ(ನ.11): ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನ ಮಣಿಸಿದ ಭಾರತ ಇದೀಗ ಪಾಕಿಸ್ತಾನಕ್ಕೆ ಶಾಕ್ ನೀಡಲು ರೆಡಿಯಾಗಿದೆ. ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾ ಮಹಿಳಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಪಾಕ್ ವಿರುದ್ಧವೂ ಕಣಕ್ಕಿಳಿಯಲಿದೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ 49 ಎಸೆತದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಈ ಪಂದ್ಯದಲ್ಲಿ ಭಾರತ 34 ರನ್‌ಗಳ ಗೆಲುವು ಸಾಧಿಸಿತ್ತು. ಇದೀಗ ಪಾಕಿಸ್ತಾನ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ.
