ವಿಶ್ವಕಪ್’ನಿಂದ ಸ್ಟಾರ್ ವೇಗಿ ಔಟ್, ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟಿಗನಿಗೆ ಚಾನ್ಸ್..!
ನೆಟ್ಸ್’ನಲ್ಲಿ ಅಭ್ಯಾಸ ನಡೆಸುವ ವೇಳೆ ಬಲಗೈ ಹೆಬ್ಬೆರಳಿಗೆ ನೋರ್ಜೆ ಗಾಯಕ್ಕೊಳಗಾಗಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ ಆರರಿಂದ ಎಂಟು ತಿಂಗಳು ಬೇಕಾಗಿರುವುದರಿಂದ ವೇಗಿಯನ್ನು ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ. ಇವರ ಸ್ಥಾನಕ್ಕೆ ಡೆಲ್ಲಿ ಆಲ್ರೌಂಡರ್’ಗೆ ಬುಲಾವ್ ಬಂದಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಕೇಪ್’ಟೌನ್[ಮೇ.07]: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತವೊಂದು ಎದುರಾಗಿದ್ದು, ತಂಡದ ಪ್ರಮುಖ ವೇಗಿ ಆ್ಯನ್ರಿಚ್ ನೋರ್ಜೆ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್ರೌಂಡರ್ ಕ್ರಿಸ್ ಮೋರಿಸ್’ಗೆ ಬುಲಾವ್ ಬಂದಿದೆ.
ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ -ಸ್ಟೇನ್, ಆಮ್ಲಾಗೆ ಸ್ಥಾನ!
ನೆಟ್ಸ್’ನಲ್ಲಿ ಅಭ್ಯಾಸ ನಡೆಸುವ ವೇಳೆ ಬಲಗೈ ಹೆಬ್ಬೆರಳಿಗೆ ನೋರ್ಜೆ ಗಾಯಕ್ಕೊಳಗಾಗಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ ಆರರಿಂದ ಎಂಟು ತಿಂಗಳು ಬೇಕಾಗಿರುವುದರಿಂದ ವೇಗಿಯನ್ನು ವಿಶ್ವಕಪ್ ತಂಡದಿಂದ ಕೈಬಿಡಲಾಗಿದೆ. 25 ವರ್ಷದ ನೋರ್ಜೆ ಏಕದಿನ ಕ್ರಿಕೆಟ್’ಗೆ ಇದೇ ವರ್ಷದ ಮಾರ್ಚ್’ನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದರು. ಶ್ರೀಲಂಕಾ ವಿರುದ್ಧ ಆಡಿದ 4 ಪಂದ್ಯಗಳಲ್ಲಿ 8 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದ ನೋರ್ಜೆ ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಏಕದಿನಕ್ಕೆ ವಿದಾಯ ಘೋಷಿಸಿದ ಸೌತ್ಆಫ್ರಿಕಾ ಸ್ಟಾರ್ ಆಲ್ರೌಂಡರ್!
ನೋರ್ಜೆ ಬದಲಿಗೆ ಆಲ್ರೌಂಡರ್ ಕ್ರಿಸ್ ಮೋರಿಸ್’ಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. 2018ರ ಫೆಬ್ರವರಿಯಲ್ಲಿ ಮೋರಿಸ್ ಕಡೆಯ ಬಾರಿಗೆ ದಕ್ಷಿಣ ಆಫ್ರಿಕಾ ತಂಡದ ಪರ ಏಕದಿನ ಕ್ರಿಕೆಟ್ ಆಡಿದ್ದರು. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಮೋರಿಸ್ 13 ವಿಕೆಟ್ ಪಡೆದು ಮಿಂಚುವ ಮೂಲಕ ದಕ್ಷಿಣ ಆಫ್ರಿಕಾ ಕ್ರಿಕೆಟ್ ಆಯ್ಕೆ ಸಮಿತಿಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿದೆ ನೋಡಿ ವಿಶ್ವಕಪ್ ಟೂರ್ನಿಗೆ ರೆಡಿಯಾದ 10 ತಂಡಗಳ ಸಂಪೂರ್ಣ ಪಟ್ಟಿ
12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಆತಿಥ್ಯ ವಹಿಸಿದ್ದು, ಮೇ.30ರಂದು ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
ವಿಶ್ವಕಪ್ ಕ್ರಿಕೆಟ್ 2019 ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ...