ಲಂಡನ್[ಮೇ.30]: ಬಹುನಿರೀಕ್ಷಿತ 12ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ಚೊಚ್ಚಲ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಉಭಯ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿವೆ.

ವಿಶ್ವಕಪ್ 2019: ಇಂಗ್ಲೆಂಡ್‌ ಶುಭಾರಂಭಕ್ಕೆ ಆಫ್ರಿಕಾ ಅಡ್ಡಿ?

ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿರುವ ಆತಿಥೇಯ ಇಂಗ್ಲೆಂಡ್ ತಂಡಕ್ಕೆ ಫಾಫ್ ಡು ಪ್ಲೆಸಿಸ್ ನೇತೃತ್ವದ ದಕ್ಷಿಣ ಆಫ್ರಿಕಾ ಶಾಕ್ ನೀಡಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಮೊದಲ ಪಂದ್ಯದಲ್ಲಿ ಆಡಲಿರುವ ಸಂಭಾವ್ಯ ತಂಡವನ್ನು ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ 

ಪಿಚ್‌ ರಿಪೋರ್ಟ್‌

ದಿ ಓವಲ್‌ ಕ್ರೀಡಾಂಗಣದ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದ್ದು, ಇಲ್ಲಿ ಇತ್ತೀಚಿನ ದಿನಗಳಲ್ಲಿ 2ನೇ ಬ್ಯಾಟಿಂಗ್‌ ನಡೆಸುವ ತಂಡಕ್ಕೆ ಹೆಚ್ಚಿನ ನೆರವು ಸಿಗುತ್ತಿದೆ. ಅಭ್ಯಾಸ ಪಂದ್ಯಗಳಲ್ಲೂ 2ನೇ ಬ್ಯಾಟಿಂಗ್‌ ನಡೆಸಿದ ತಂಡಗಳೇ ಗೆಲುವು ಸಾಧಿಸಿದವು. ಹೀಗಾಗಿ ಟಾಸ್‌ ಗೆಲ್ಲುವ ತಂಡ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರೆ ಅಚ್ಚರಿಯಿಲ್ಲ.

ಸಂಭವನೀಯ ಆಟಗಾರರ ಪಟ್ಟಿ

ಇಂಗ್ಲೆಂಡ್‌: ಜೇಸನ್‌ ರಾಯ್‌, ಜಾನಿ ಬೇರ್‌ಸ್ಟೋವ್‌, ಜೋ ರೂಟ್‌, ಇಯಾನ್‌ ಮಾರ್ಗನ್‌ (ನಾಯಕ), ಬೆನ್‌ ಸ್ಟೋಕ್ಸ್‌, ಜೋಸ್‌ ಬಟ್ಲರ್‌, ಮೋಯಿನ್‌ ಅಲಿ, ಕ್ರಿಸ್‌ ವೋಕ್ಸ್‌, ಜೋಫ್ರಾ ಆರ್ಚರ್‌, ಆದಿಲ್‌ ರಶೀದ್‌, ಲಿಯಾಮ್‌ ಪ್ಲಂಕೆಟ್‌.

ದ.ಆಫ್ರಿಕಾ: ಹಾಶೀಂ ಆಮ್ಲಾ, ಕ್ವಿಂಟನ್‌ ಡಿ ಕಾಕ್‌, ಫಾಫ್‌ ಡು ಪ್ಲೆಸಿ (ನಾಯಕ), ವಾನ್‌ ಡರ್‌ ಡುಸ್ಸೆನ್‌, ಡೇವಿಡ್‌ ಮಿಲ್ಲರ್‌, ಜೆ.ಪಿ.ಡುಮಿನಿ, ಆ್ಯಂಡಿಲೆ ಫೆಲುಕ್ವಾಯೋ, ಡ್ವೇನ್‌ ಪ್ರಿಟೋರಿಯಸ್‌, ಕಗಿಸೋ ರಬಾಡ, ಲುಂಗಿ ಎನ್‌ಗಿಡಿ, ಇಮ್ರಾನ್‌ ತಾಹಿರ್‌.

ಸ್ಥಳ: ಲಂಡನ್‌, 
ಪಂದ್ಯ ಆರಂಭ: ಮಧ್ಯಾಹ್ನ 3ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ 1

ಒಟ್ಟು ಮುಖಾಮುಖಿ: 59

ಇಂಗ್ಲೆಂಡ್‌: 26

ದ.ಆಫ್ರಿಕಾ: 29

ಟೈ: 01

ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ vs ದ.ಆಫ್ರಿಕಾ

ಪಂದ್ಯ: 06

ಇಂಗ್ಲೆಂಡ್‌: 03

ದ.ಆಫ್ರಿಕಾ: 03