ನಾಟಿಂಗ್‌ಹ್ಯಾಮ್(ಜೂ.03): ವಿಶ್ವಕಪ್ ಲೀಗ್ ಟೂರ್ನಿ ಆರಂಭದಲ್ಲೇ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. 6ನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತ ಪಾಕ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

 

 

ಹ್ಯಾರಿಸ್ ಸೊಹೈಲ್ ಹಾಗೂ ಇಮಾದ್ ವಾಸಿಮ್ ಬದಲು ಹಿರಿಯ ಆಲ್ರೌಂಡರ್ ಶೋಯೆಬ್ ಮಲಿಕ್ ಹಾಗೂ ಆಸಿಫ್ ಆಲಿ ಪಾಕ್ ತಂಡ ಸೇರಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಲಿಯಾಮ ಪ್ಲಂಕೆಟ್ ಬದಲು ಮಾರ್ಕ್ ವುಡ್ ತಂಡ ಸೇರಿಕೊಂಡಿದ್ದಾರೆ.