ಭಾರತ ವಿಶ್ವಕಪ್ ತಂಡದಲ್ಲಿ ಇಲ್ಲ ಯಾವುದೇ ಬದಲಾವಣೆ
ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಆಗಬಹುದು ಎಂದು ನಿರೀಕ್ಷೆ ಹುಸಿಯಾಗಿದೆ. ಈ ಮೊದಲು ಪ್ರಕಟಿಸಿದ್ದ 15 ಆಟಗಾರರ ತಂಡವೇ ಇಂಗ್ಲೆಂಡ್’ಗೆ ಪ್ರಯಾಣಿಸಲಿದೆ.
ನವದೆಹಲಿ(ಮೇ.21): ಐಸಿಸಿ ಏಕದಿನ ವಿಶ್ವಕಪ್‌ಗೆ ಕಳೆದ ತಿಂಗಳು ಪ್ರಕಟಿಸಿದ್ದ 15 ಸದಸ್ಯರ ತಂಡವನ್ನೇ ಉಳಿಸಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ತಂಡದಲ್ಲಿ ಬದಲಾವಣೆ ಮಾಡಲು ಮೇ 23 ಕೊನೆಯ ದಿನಾಂಕವಾಗಿದ್ದು, ಯಾವುದೇ ಬದಲಾವಣೆ ಇಲ್ಲ ಎಂದು ಬಿಸಿಸಿಐ ಸ್ಪಪ್ಟಪಡಿಸಿದೆ ಎಂದು ವರದಿಯಾಗಿದೆ.
ವಿಶ್ವಕಪ್ 2019: ಕೊಹ್ಲಿಗೆ ಸಲಹೆ ನೀಡಿದ ವಿರೇಂದ್ರ ಸೆಹ್ವಾಗ್!
ಆಲ್ರೌಂಡರ್ ಕೇದಾರ್ ಜಾಧವ್‌ರ ಫಿಟ್ನೆಸ್ ಬಗ್ಗೆ ಬಿಸಿಸಿಐಗೆ ಅನುಮಾನವಿತ್ತು. ಆದರೆ ಕಳೆದ ಗುರುವಾರ ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿ, ವಿಶ್ವಕಪ್ ತಂಡದಲ್ಲಿ ಸ್ಥಾನ ಉಳಿಸಿಕೊಂಡರು. ಒಂದೊಮ್ಮೆ ಜಾಧವ್ ಗುಣಮುಖರಾಗದಿದ್ದರೆ ಅವರ ಬದಲಿಗೆ ರಿಷಭ್ ಪಂತ್ ಇಲ್ಲವೇ ಅಂಬಟಿ ರಾಯುಡು ಅವರನ್ನು ಆಯ್ಕೆ ಮಾಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿತ್ತು ಎನ್ನಲಾಗಿದೆ. ಬುಧವಾರ ಭಾರತ ತಂಡ ಇಂಗ್ಲೆಂಡ್‌ಗೆ ಹೊರಡಲಿದ್ದು, ಮಂಗಳವಾರ ಸಂಜೆ ಮುಂಬೈನಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಪ್ರಧಾನ ಕೋಚ್ ರವಿಶಾಸ್ತ್ರಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ; ಕನ್ನಡಿಗನಿಗೆ ಚಾನ್ಸ್
2015ರ ವಿಶ್ವಕಪ್ ಟೂರ್ನಿಯ ಬಳಿಕ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿದೆ. 2019ನೇ ಸಾಲಿನ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಮೇ.30ರಿಂದ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.
ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ...