ಬೆಂಗಳೂರು[ಮೇ.27]: ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ನಡೆದ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ 2ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಇದರ ಜತೆಗೆ ತವರಿನಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಎನ್ನುವ ಕೀರ್ತಿಗೆ ಟೀಂ ಇಂಡಿಯಾ ಪಾತ್ರವಾಗಿತ್ತು. 

ಏಕದಿನ ವಿಶ್ವಕಪ್ ಟೂರ್ನಿಯ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...

14 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ 2 ಗುಂಪುಗಳಾಗಿ ವಿಂಗಡಿಸಲಾಗಿತ್ತು. ತಲಾ 7 ತಂಡಗಳು ಒಂದೊಂದು ಗುಂಪಿನಲ್ಲಿದ್ದವು. ಎರಡೂ ಗುಂಪಿನ ಅಗ್ರ 4 ತಂಡಗಳು ಸೂಪರ್ 8 ಹಂತಕ್ಕೆ ಪ್ರವೇಶಿಸಿದವು. ಸೂಪರ್ 8ರ ಹಂತದಲ್ಲಿ ವಿಂಡೀಸ್, ಆಸ್ಟ್ರೇಲಿಯಾ, ದ.ಆಫ್ರಿಕಾ ಹಾಗೂ ಇಂಗ್ಲೆಂಡ್ ಸೋತು ಹೊರಬಿದ್ದವು.

ಭಾರತ, ಪಾಕಿಸ್ತಾನ, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ಸೆಮೀಸ್ಗೇರಿದವು. ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ, ನ್ಯೂಜಿಲೆಂಡ್ನ್ನು ಸೋಲಿಸಿದ ಶ್ರೀಲಂಕಾ ಫೈನಲ್ ತಲುಪಿದವು. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್’ನಲ್ಲಿ ಶ್ರೀಲಂಕಾವನ್ನು 6 ವಿಕೆಟ್’ಗಳಿಂದ ಸೋಲಿಸಿದ ಭಾರತ ಟ್ರೋಫಿ ಎತ್ತಿ ಹಿಡಿಯಿತು.

ಈ ಗೆಲುವಿನೊಂದಿಗೆ ಬರೋಬ್ಬರಿ 28 ವರ್ಷಗಳ ಬಳಿಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿದು ಸಂಭ್ರಮಿಸಿತ್ತು. ಈ ಮೊದಲು 1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಜಯಿಸಿತ್ತು.