ನವದೆಹಲಿ[ಏ.18]: ಭಾರತದ ತಾರಾ ಕುಸ್ತಿಪಟು ಭಜರಂಗ್ ಪೂನಿಯಾ, ವಿಶ್ವ ಕುಸ್ತಿ ರ‍್ಯಾಂಕಿಂಗ್‌ನಲ್ಲಿ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ. ಪುರುಷರ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಜರಂಗ್ ಈ ಸಾಧನೆ ಮಾಡಿದ್ದಾರೆ.

ಯುನೈಟೆಡ್ ವಿಶ್ವ ಕುಸ್ತಿ ಸಂಸ್ಥೆ ಬುಧವಾರ ಕುಸ್ತಿಪಟುಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಜರಂಗ್ ಚಿನ್ನ ಜಯಿಸಿದ್ದಾರೆ. 

58 ರ‍್ಯಾಂಕಿಂಗ್ ಅಂಕಗಳಿಸಿರುವ ಭಜರಂಗ್, ಏ. 23 ರಂದು ಚೀನಾದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ಗಾಗಿ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ಭಜರಂಗ್ ವಿಶ್ವ ಕುಸ್ತಿ ರ‍್ಯಾಂಕಿಂಗ್‌ನಲ್ಲಿ ನಂ.1 ಆಗಿದ್ದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.