Asianet Suvarna News Asianet Suvarna News

ವಿಶ್ವ ಚಾಂಪಿಯನ್‌ಶಿಪ್‌ಗೆ ಕುಸ್ತಿಪಟು ಸುಶೀಲ್‌ ಆಯ್ಕೆ

2 ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಕುಸ್ತಿ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

Wrestler Sushil Kumar seals spot in India squad for World Championships
Author
New Delhi, First Published Aug 21, 2019, 10:49 AM IST
  • Facebook
  • Twitter
  • Whatsapp

ನವದೆಹಲಿ(ಆ.21): ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಸತತವಾಗಿ ಹಿನ್ನಡೆ ಅನುಭವಿಸುತ್ತಿರುವ ಭಾರತದ ದಿಗ್ಗಜ ಕುಸ್ತಿಪಟು ಸುಶೀಲ್‌ ಕುಮಾರ್‌, ಸೆ.14ರಿಂದ ಕಜಕಸ್ತಾನದಲ್ಲಿ ನಡೆಯಲಿರುವ ಕುಸ್ತಿ ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. 

ಹೇಳದೆ ಕೇಳದೆ ಶಿಬಿರ ತೊರೆದ ಸಾಕ್ಷಿಗೆ ಕುಸ್ತಿ ಫೆಡರೇಷನ್‌ ಚಾಟಿ!

ಮಂಗಳವಾರ ಇಲ್ಲಿನ ಐಜಿಐ ಕ್ರೀಡಾಂಗಣದಲ್ಲಿ ನಡೆದ ಭಾರತ ಕುಸ್ತಿ ಫೆಡರೇಷನ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ 74 ಕೆ.ಜಿ ವಿಭಾಗದ ಫೈನಲ್‌ ಪಂದ್ಯದಲ್ಲಿ ಸುಶೀಲ್‌4-2 ಅಂಕಗಳಲ್ಲಿ ಜಿತೇಂದ್ರ ಕುಮಾರ್‌ ವಿರುದ್ಧ ಗೆಲುವು ಸಾಧಿಸಿ, ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದರು. ಸುಶೀಲ್‌ ಪಂದ್ಯ ವೀಕ್ಷಿಸಲು ಸುಮಾರು 1500 ಅಭಿಮಾನಿಗಳು ಆಗಮಿಸಿದ್ದು ವಿಶೇಷ.

45 ದಿನಗಳಲ್ಲಿ 6 ಚಿನ್ನ ಗೆದ್ದ ಹಿಮಾ ದಾಸ್‌!

ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮೊದಲ ಸುತ್ತಿನಲ್ಲಿ 4-0 ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲಿ ಜಿತೇಂದ್ರ ಕುಮಾರ್ 2 ಅಂಕಗಳಿಸಿದರಾದರೂ  ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. 36 ವರ್ಷದ ಸುಶೀಲ್ ಕುಮಾರ್ 2010ರಲ್ಲಿ ನಡೆದ ವಿಶ್ವ ಚಾಂಪಿಯನ್’ಶಿಪ್’ನಲ್ಲಿ 66 ಕೆ.ಜಿ ವಿಭಾಗದಲ್ಲಿ ಪದಕ ಜಯಿಸಿದ್ದರು. 
 

Follow Us:
Download App:
  • android
  • ios