ತಾವು ಮಂಡಿ ನೋವಿನಿಂದ ಬಳಲುತ್ತಿದ್ದು, ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಭಾರತೀಯ ಕುಸ್ತಿ ಫೆಡರೇಷನ್'ಗೆ ತಿಳಿಸಿರುವುದಾಗಿ ವರದಿಯಾಗಿದೆ.

ನವದೆಹಲಿ(ಫೆ.25): ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್, ಕಿರ್ಗಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕುಸ್ತಿ ಚಾಂಪಿಯನ್ ಶಿಪ್‌ನಿಂದ ಹಿಂದೆ ಸರಿದಿದ್ದಾರೆ.

ತಾವು ಮಂಡಿ ನೋವಿನಿಂದ ಬಳಲುತ್ತಿದ್ದು, ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಭಾರತೀಯ ಕುಸ್ತಿ ಫೆಡರೇಷನ್ ಗೆ ತಿಳಿಸಿರುವುದಾಗಿ ವರದಿಯಾಗಿದೆ. 34 ವರ್ಷದ ಸುಶೀಲ್ ಇತ್ತೀಚೆಗೆ ನಡೆದ ಏಷ್ಯಾ ಚಾಂಪಿಯನ್‌ಶಿಪ್ ಹಾಗೂ ಕಾಮನ್ ವೆಲ್ತ್ ಗೇಮ್ಸ್ ಆಯ್ಕೆ ಟ್ರಯಲ್ಸ್ ವೇಳೆ ಮಂಡಿಗೆ ಪೆಟ್ಟು ಮಾಡಿಕೊಂಡಿದ್ದರು. ಕಾಮನ್‌ವೆಲ್ತ್ನಲ್ಲಿ ಪದಕ ನಿರೀಕ್ಷೆಯಿಟ್ಟುಕೊಂಡಿರುವ ಸುಶೀಲ್, ಮುನ್ನೆಚ್ಚರಿಕಾ ಕ್ರಮವಾಗಿ ಏಷ್ಯಾ ಕೂಟದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.