Wrestlers sexual harassment case: ಬ್ರಿಜ್‌ಭೂಷಣ್‌ಗೆ ತಾತ್ಕಾಲಿಕ ರಿಲೀಫ್..! ಮಧ್ಯಂತರ ಜಾಮೀನು ಮಂಜೂರು
WFI ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್‌ಗೆ ತಾತ್ಕಾಲಿಕ ಜಾಮೀನು ಮಂಜೂರು
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್
ಎರಡು ದಿನಗಳ ಮಟ್ಟಿಗೆ ಬಂಧನ ಭೀತಿಯಿಂದ ಪಾರಾದ ಬಿಜೆಪಿ ಸಂಸದ
ನವದೆಹಲಿ(ಜು.18): ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್‌ಗೆ ಡೆಲ್ಲಿ ರೂಸೋ ಅವಿನ್ಯೂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ತಾತ್ಕಾಲಿಕ ರಿಲೀಫ್ ನೀಡಿದೆ. ಬ್ರಿಜ್‌ಭೂಷಣ್ ಸಿಂಗ್ ಹಾಗೂ ವಿನೋದ್ ತೋಮರ್‌ಗೆ ಎರಡು ದಿನಗಳ ಮಟ್ಟಿಗೆ ತಾತ್ಕಾಲಿಕವಾಗಿ ಜಾಮೀನು ಮಂಜೂರು ಮಾಡಲಾಗಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಹರ್ಜಿತ್ ಸಿಂಗ್ ಜಸ್ಪಾಲ್, 25,000 ರುಪಾಯಿ ಬೇಲ್ ಬಾಂಡ್ ಪಡೆದು, ಬ್ರಿಜ್‌ಭೂಷಣ್ ಸಿಂಗ್ ಅವರಿಗೆ ಜಾಮೀನು ನೀಡಿದೆ. ಇನ್ನು ಬ್ರಿಜ್‌ಭೂಷಣ್ ಸಿಂಗ್ ಮೇಲಿರುವ ವಿಚಾರಣೆಯನ್ನು ಎರಡು ದಿನಗಳ ಬಳಿಕ ಅಂದರೆ ಜುಲೈ 20, 2023ರಲ್ಲಿ ಕೈಗೆತ್ತಿಕೊಳ್ಳಲಿದೆ.
ಬ್ರಿಜ್‌ಭೂಷಣ್ ಸಿಂಗ್ ಪರ ವಕೀಲರಾದ ರಾಜಿವ್ ಮೋಹನ್, ವಿಚಾರಣೆಯ ವೇಳೆ ಮೀಡಿಯಾ ಟ್ರಯಲ್ ಕುರಿತಂತೆ ಮಾತನಾಡಿದಾಗ ನ್ಯಾಯಾದೀಶರು ಹೈಕೋರ್ಟ್ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದರು.
ಏಷ್ಯಾಡ್ ಫುಟ್ಬಾಲ್ ಆಡಲು ಅವಕಾಶ ಕೊಡಿಸುವಂತೆ ಪ್ರಧಾನಿಗೆ ಸ್ಟಿಮಾಕ್ ಮನವಿ
ಕಳೆದ ಏಪ್ರಿಲ್‌ನಲ್ಲಿ ಅಪ್ರಾಪ್ತೆ ಸೇರಿದಂತೆ 7 ಮಂದಿ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬ್ರಿಜ್‌ಭೂಷಣ್ ವಿರುದ್ಧ ಪೋಕ್ಸೋ ಸೇರಿ 2 ಎಫ್ಐಆರ್ ದಾಖಲಿಸಿದ್ದರು. ಈ ಬಗ್ಗೆ 5 ದೇಶಗಳಲ್ಲಿ ನಡೆದಿದ್ದ ಕುಸ್ತಿ ಕೂಟಗಳ ವೇಳೆ ದಾಖಲಾಗಿದ್ದ ಸಿಸಿಟೀವಿ ದೃಶ್ಯಗಳ ಪರಿಶೀಲನೆ, ಕುಸ್ತಿಪಟುಗಳು, ರೆಫ್ರಿ ಹಾಗೂ ಕೋಚ್ಗಳು ಸೇರಿದಂತೆ 180ಕ್ಕೂ ಹೆಚ್ಚು ಮಂದಿಯ ಹೇಳಿಕೆ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪೂರ್ಣಗೊಳಿಸಿ ದೆಹಲಿ ಮ್ಯಾಜಿಸ್ಪ್ರೇಟ್ ಕೋರ್ಚ್‌ಗೆ 1500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು
ವಿವಿಧ ಸೆಕ್ಷನ್ಗಳಡಿ ಚಾರ್ಜ್ಶೀಟ್
ಬ್ರಿಜ್ ವಿರುದ್ಧ ಪೋಕ್ಸೋ ಕೇಸ್ ರದ್ದುಗೊಳಿಸಲು ಶಿಫಾರಸು ಮಾಡಲಾಗಿದ್ದರೂ ಇತರರ ದೂರುಗಳಿಗೆ ಸಂಬಂಧಿಸಿದಂತೆ ವಿವಿಧ ಸೆಕ್ಷನ್ಗಳಡಿ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಐಪಿಸಿ 354(ಮಹಿಳೆಯರ ಮೇಲೆ ಹಲ್ಲೆ), 354ಎ(ಲೈಂಗಿಕ ಕಿರುಕುಳ), 354ಡಿ(ಹಿಂಬಾಲಿಸುವಿಕೆ) ಹಾಗೂ 506(ಬೆದರಿಕೆ) ಸೆಕ್ಷನ್‌ಗಳ ಅಡಿಯಲ್ಲಿ ದೋಷಾರೋಪ ಪಟ್ಟಿಸಲ್ಲಿಸಲಾಗಿದೆ. ಇದರ ಜೊತೆಗೆ ಈಗಾಗಲೇ ಅಮನತುಗೊಂಡಿರುವ ಡಬ್ಲ್ಯುಎಫ್ಐನ ಹೆಚ್ಚುವರಿ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ಐಪಿಸಿ 109, 354, 354ಎ ಹಾಗೂ 506 ಸೆಕ್ಷನ್ಗಳಡಿ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ.
ಅಳಿಯ ಕೆ ಎಲ್ ರಾಹುಲ್‌ಗೆ ವಾರ್ನಿಂಗ್ ಕೊಟ್ಟ ಮಾವ ಸುನಿಲ್ ಶೆಟ್ಟಿ..!
ಬ್ರಿಜ್ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದು ಏಕೆ?
ಅಪ್ರಾಪ್ತೆಯ ದೂರಿನಂತೆ ಬ್ರಿಜ್‌ಭೂಷಣ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡು ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಇತ್ತೀಚೆಗೆ ದೂರುದಾರ ಅಪ್ರಾಪ್ತೆಯ ತಂದೆಯೇ ತಾವು ಸಿಟ್ಟಿನಲ್ಲಿ ಸುಳ್ಳು ಮಾಹಿತಿ ನೀಡಿದ್ದಾಗಿ ಸ್ಪಷ್ಟೀಕರಣ ನೀಡಿದ್ದರು. ಅಪ್ರಾಪ್ತೆಯೂ ತಾವು ಮೊದಲು ನೀಡಿದ್ದ ಹೇಳಿಕೆಯನ್ನು ಬದಲಿಸಿದ್ದರು. ಇದರ ಜೊತೆಗೆ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳವಾಗಿದೆ ಎನ್ನುವುದಕ್ಕೆ ಪೂರಕ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಪೋಕ್ಸೋ ಕೇಸ್ ರದ್ದುಪಡಿಸುವಂತೆ ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಒಂದು ವೇಳೆ ಪೋಕ್ಸೋ ಕೇಸ್‌ನಲ್ಲಿ ಆರೋಪ ಸಾಬೀತಾದರೆ ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗಲಿದೆ.