ವಿಶ್ವ ಚಾಂಪಿಯನ್‌ಶಿಪ್‌ ಗೆದ್ದ ಸಿಂಧುಗೆ ಬಹುಮಾನ ಘೋಷಿಸಿದ ಯಡಿಯೂರಪ್ಪ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಸ್ಟಾರ್ ಮಹಿಳಾ ಶೆಟ್ಲರ್ ಪಿ.ವಿ.ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ ಸೇರಿಂತೆ ಹಲವರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ಕರ್ನಾಟಕ ಸಿಎಂ, ಸಿಂಧುಗೆ ಅಭಿನಂದನೆಗಳನ್ನು ತಿಳಿಸುವುದರ ಜತೆಗೆ ಬಹುಮಾನ ಘೋಷಣೆ ಮಾಡಿದ್ದಾರೆ. 

Yediyurappa announces Rs 5 lakh To pv sindhu wining world badminton championship

ನವದೆಹಲಿ/ಬೆಂಗಳೂರು, [ಆ.25]: ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಪಿ.ವಿ.ಸಿಂಧುಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಘೋಷಣೆ ಮಾಡಿದೆ.

ವಿಶ್ವ ಬ್ಯಾಡ್ಮಿಂಟನ್: ಚಿನ್ನ ಗೆದ್ದು ಇತಿಹಾಸ ಬರೆದ PV ಸಿಂಧು

ನವದೆಹಲಿಯಲ್ಲಿ ಪಿವಿ ಸಿಂಧು ಸಾಧನೆಗೆ ಶುಭ ಕೋರಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಬ್ಯಾಡ್ಮಿಂಟನ್ ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಸಿಂಧುಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ನೀಡೋದಾಗಿ ಹೇಳಿದರು.

ಇಂದು [ಭಾನುವಾರ] ಸ್ವಿಟ್ಜರ್ಲೆಂಡ್ ನಲ್ಲಿ ನಡೆದ ಮಹಿಳಾ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌  ಫೈನಲ್ ಪಂದ್ಯದಲ್ಲಿ ಜಪಾನ್ ನ ಸ್ಟಾರ್  ಆಟಗಾರ್ತಿ ನೊಜೊಮಿ ಒಕುಹರಾರನ್ನ  21-7, 21-7 ನೇರ ಸೆಟ್ ಗಳಿಂದ ಮಣಿಸಿದರು. ಈ ಮೂಲಕ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾದರು.

Latest Videos
Follow Us:
Download App:
  • android
  • ios