ಇಲ್ಲಿನ ಮೇಜರ್ ಧ್ಯಾನ್'ಚಂದ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಲ್ಜಿಯಂ ತಂಡವನ್ನು 2-1 ಅಂತರದಲ್ಲಿ ಮಣಿಸುವ ಮೂಲಕ ಭಾರತೀಯ ಕಿರಿಯರ ಹಾಕಿ ತಂಡ 15 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್ ಎತ್ತಿ ಹಿಡಿಯಿತು.
ಲಖನೌ(ಡಿ.18): ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಕಿರಿಯರ ಹಾಕಿ ಟೀಂ ಇಂಡಿಯಾ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.
ಇಲ್ಲಿನ ಮೇಜರ್ ಧ್ಯಾನ್'ಚಂದ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಲ್ಜಿಯಂ ತಂಡವನ್ನು 2-1 ಅಂತರದಲ್ಲಿ ಮಣಿಸುವ ಮೂಲಕ ಭಾರತೀಯ ಕಿರಿಯರ ಹಾಕಿ ತಂಡ 15 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್ ಎತ್ತಿ ಹಿಡಿಯಿತು.
ಅಜೇಯವಾಗಿ ಫೈನಲ್ ತಲುಪಿದ್ದ ಕಿರಿಯರ ಹಾಕಿ ಟೀಂ ಇಂಡಿಯಾ ಫೈನಲ್'ನಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಪಂದ್ಯದ ಎಂಟನೇ ನಿಮಿಷದಲ್ಲಿ ಗುರ್ಜಾಂತ್ ಸಿಂಗ್ ಅದ್ಭುತ ಗೋಲು ಬಾರಿಸುವ ಮೂಲಕ ಭಾರತಕ್ಕೆ ಮೊದಲ ಮುನ್ನೆಡೆ ತಂದುಕೊಟ್ಟರು. ಇದಾದ ನಂತರ 22ನೇ ನಿಮಿಷದಲ್ಲಿ ಸಿಮ್ರಾನ್'ಜೀತ್ ಎರಡನೇ ಗೋಲು ಬಾರಿಸಿ ಭಾರತಕ್ಕೆ 2-0 ಮುನ್ನಡೆ ಸಾಧಿಸಲು ನೆರವಾದರು.
ಇನ್ನು ಬೆಲ್ಜಿಯಂ ಪರ 70ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು. ನಂತರ ರಕ್ಷಣಾತ್ಮಕ ಆಟಕ್ಕೆ ಮೊರೆಹೋದ ಟೀಂ ಇಂಡಿಯಾ ಅಂತಿಮವಾಗಿ 2-1 ಗೋಲುಗಳ ಅಂತರದಲ್ಲಿ ಜಯಭೇರಿ ಬಾರಿಸಿತು.