ಬೇ ಓವಲ್(ಜ.28): ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲ 2 ಪಂದ್ಯ ಬಾಕಿ ಇರುವಂತೆ ಸರಣಿ ವಶಪಡಿಸಿಕೊಂಡಿದೆ. ಭಾರತದ ಗೆಲುವಿಗೆ ಕಾರಣರಾದ ವೇಗಿ ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಶಮಿ ಮಾತಿಗೆ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಸೈಮನ್ ಡೌಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಿವೀಸ್ ವಿರುದ್ಧದ 3ನೇ ಪಂದ್ಯದಲ್ಲಿ 7 ವಿಕೆಟ್ ಗೆಲುವು- ಭಾರತಕ್ಕೆ ಏಕದಿನ ಸರಣಿ!

3 ವಿಕೆಟ್ ಕಬಳಿಸಿದ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ, ಸೈಮನ್ ಡೌಲ್ ಪ್ರಶ್ನೆಗೆ ಉತ್ತರಿಸಿದರು. ಇಂಗ್ಲೀಷ್‌ನಲ್ಲಿ ಉತ್ತರ ನೀಡಿದ ಶಮಿಗೆ, ಸೈಮನ್ ಡೌಲ್ ಹಿಂದಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಯುವರ್ ಇಂಗ್ಲೀಷ್ ಬಹುತ್ ಅಚ್ಚಾ ಎಂದು ಸೈಮನ್ ಹೇಳಿದರು. ಇದು ಶಮಿ ಹಾಗೂ ಪಕ್ಕದಲ್ಲಿದ್ದ ನಾಯಕ ವಿರಾಟ್ ಕೊಹ್ಲಿಗೆ ನಗು ತರಿಸಿತು.

 

 

ಇದನ್ನೂ ಓದಿ: 68ನೇ ವಯಸ್ಸಲ್ಲಿ ನಿವೃತ್ತಿ ಪಡೆದ ಅಂತರಾಷ್ಟ್ರೀಯ ಕ್ರಿಕೆಟಿಗ!

ನ್ಯೂಜಿಲೆಂಡ್ ವಿರುದ್ದದ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್ ಗೆಲುವು ಸಾಧಿಸಿದರೆ, 2ನೇ ಪಂದ್ಯದಲ್ಲಿ 90 ರನ್ ಗೆಲುವು ದಾಖಲಿಸಿತ್ತು. ಇದೀಗ 3ನೇ ಪಂದ್ಯದಲ್ಲಿ 7 ವಿಕೆಟ್ ಗೆಲುವು ಸಾಧಿಸೋ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-0 ಅಂತರದ ಮುನ್ನಡೆ ಪಡೆದಿದೆ.