ಮಾಲ್ಡೀವ್ಸ್(ಫೆ.19): ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದ್ದಂತೆ ಟೀಂ ಇಂಡಿಯಾ ಆಲ್ರೌಂಡರ್ ಯುವರಾಜ್ ಸಿಂಗ್ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಮಾಲ್ಡೀವ್ಸ್ ವಿರುದ್ದ ನಡೆಯುತ್ತಿರುವ ಫ್ರೆಂಡ್ಲಿ ಮ್ಯಾಚ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ರಿವರ್ಸ್ ಸ್ವೀಪ್ ಸಿಕ್ಸರ್ ಸಿಡಿಸೋ ಮೂಲಕ ಅಬ್ಬರಿಸಿದ್ದಾರೆ.

 

 

ಇದನ್ನು ಓದಿ: ಪುಲ್ವಾಮಾ ದಾಳಿ: ಕಂಗಾಲಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಹತಾಶೆ ಮಾತು!

ಮಾಲೆಯಲ್ಲಿ ನಡೆಯುತ್ತಿರುವ ಫ್ರೆಂಡ್ಲಿ ಪಂದ್ಯದಲ್ಲಿ ಯುವರಾಜ್ ಸಿಂಗ್ ಏರ್ ಇಂಡಿಯಾ ಪರ ಆಡುತ್ತಿದ್ದಾರೆ. ಇತ್ತೀಚೆಗಷ್ಟೇ ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸೋ ಮೂಲಕ ವಿಶ್ವಕಪ್ ತಂಡ ಸೇರಿಕೊಳ್ಳೋ ವಿಶ್ವಾಸ ವ್ಯಕ್ತಪಡಿಸಿದ್ದರು. 

ಇದನ್ನು ಓದಿ: ಪುಲ್ವಾಮ ದಾಳಿ: ಪಾಕ್ ವಿರುದ್ಧದ ವಿಶ್ವಕಪ್ ಪಂದ್ಯ ಬಹಿಷ್ಕರಿಸಲು CCI ಆಗ್ರಹ!

2011ರ ವಿಶ್ವಕಪ್ ಟೂರ್ನಿ ಗೆಲುವಿನಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಆಲ್ರೌಂಡರ್ ಪ್ರದರ್ಶನ ನೀಡಿದ ಯುವಿ, 2011ರ ವಿಶ್ವಕಪ್ ಟೂರ್ನಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಸ್ವೀಕರಿಸಿದ್ದರು. ಇದೀಗ 8 ವರ್ಷಗಳ ಬಳಿಕ ಮತ್ತೆ ವಿಶ್ವಕಪ್ ತಂಡ ಸೇರಿಕೊಳ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.