ಮುಂಬೈ(ಮೇ.04): ಐಪಿಎಲ್ ಟೂರ್ನಿ ಅಂತಿಮ ಘಟ್ಟ ತಲುಪಿದೆ. ಲೀಗ್ ಪಂದ್ಯಗಳು ನಾಳೆ(ಮೇ.05) ಮುಕ್ತಾಯಗೊಳ್ಳಲಿದೆ. ಬಳಿಕ ಪ್ಲೇ ಆಫ್ ಪಂದ್ಯಗಳು ನಡೆಯಲಿದೆ. ಇದೀಗ ಎಲ್ಲರ ಚಿತ್ತ ವಿಶ್ವಕಪ್ ಟೂರ್ನಿಯತ್ತ ನೆಟ್ಟಿದೆ. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಯುವರಾಜ್ ಸಿಂಗ್ ಈ ಬಾರಿ ವಿಶ್ವಕಪ್ ಗೆಲ್ಲೋ ನೆಚ್ಚಿನ ತಂಡ ಯಾವುದು ಅನ್ನೋ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ವಿಶ್ವಕಪ್‌ ಜೆರ್ಸಿಯಲ್ಲಿ ಬಾಂಗ್ಲಾದೇಶ ಎಡವಟ್ಟು- ಟೀಕೆಗೆ ಬೆಚ್ಚಿ ಬಿದ್ದ ಮಂಡಳಿ!

ಯುವಿ ಪ್ರಕಾರ, ಟೀಂ ಇಂಡಿಯಾ ಅಥವಾ ಇಂಗ್ಲೆಂಡ್ ಈ ಬಾರಿ ವಿಶ್ವಕಪ್ ಗೆಲ್ಲೋ 2 ನೆಚ್ಚಿನ ತಂಡಗಳು. ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ತಂಡಕ್ಕೆ ವಾಪಾಸ್ಸಾಗೋ ಮೂಲಕ ಆಸ್ಟ್ರೇಲಿಯಾ ಬಲಿಷ್ಠವಾಗಿದೆ. ಹೀಗಾಗಿ ಪ್ರಶಸ್ತಿ ಗೆಲ್ಲೋ 3ನೇ ತಂಡ ಆಸ್ಟ್ರೇಲಿಯಾ. ಇನ್ನು ನಾಲ್ಕನೇ ತಂಡ ಸದ್ಯಕ್ಕೆ ಗೊತ್ತಿಲ್ಲ ಎಂದು ಯುವರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಇಲ್ಲಿದೆ ನೋಡಿ ವಿಶ್ವಕಪ್ ಟೂರ್ನಿಗೆ ರೆಡಿಯಾದ 10 ತಂಡಗಳ ಸಂಪೂರ್ಣ ಪಟ್ಟಿ

2011ರ ವಿಶ್ವಕಪ್ ಟೂರ್ನಿ ಗೆಲುವಿನಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಬುತ ಪ್ರದರ್ಶನ ನೀಡಿದ ಯುವರಾಜ್ ಸಿಂಗ್ ಭಾರತ್ತೆ 28 ವರ್ಷಗಳ ಬಳಿಕ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಇಷ್ಟೇ ಅಲ್ಲ ಸರಣಿ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದಿದ್ದರು.