ಜಹೀರ್ ಖಾನ್ ಕೆಲ ತಿಂಗಳ ಹಿಂದಷ್ಟೇ ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು. ಜೀವನ ನಿರ್ವಹಣೆಗಾಗಿ ಜಹೀರ್ ಬೌಲಿಂಗ್ ಕೋಚ್ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ನವದೆಹಲಿ(ನ.23): ಆರ್ಥಿಕ ತೊಡಕುಗಳಿಂದಾಗಿ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರು ಕೇಳಿದ್ದ ಭಾರತ ತಂಡದ ಬೌಲಿಂಗ್ ತರಬೇತುದಾರನ ಸ್ಥಾನವನ್ನು ನೀಡಲು ಬಿಸಿಸಿಐ ನಿರಾಕರಿಸಿದೆ.

ಜಹೀರ್ ಖಾನ್ ಕೆಲ ತಿಂಗಳ ಹಿಂದಷ್ಟೇ ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು. ಜೀವನ ನಿರ್ವಹಣೆಗಾಗಿ ಜಹೀರ್ ಬೌಲಿಂಗ್ ಕೋಚ್ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಜಹೀರ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ಸದ್ಯ ಅನಿಲ್ ಕುಂಬ್ಳೆ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಇನ್ನು ಬ್ಯಾಟಿಂಗ್‌ಗೆ ಸಂಜಯ್ ಬಂಗಾರ್, ಫೀಲ್ಡಿಂಗ್‌ಗೆ ರಾಮಕೃಷ್ಣನ್ ಶ್ರೀಧರ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಬೌಲಿಂಗ್ ಕೋಚ್ ಸ್ಥಾನ ಖಾಲಿ ಇರುವುದರಿಂದ ಜಹೀರ್ ಬಿಸಿಸಿಐಗೆ ಅರ್ಜಿ ಸಲ್ಲಿಸಿದ್ದರು.