2011ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ವೇಗದ ಬೌಲಿಂಗ್ ಸಾರಥ್ಯ ವಹಿಸಿದ್ದ ಜಾಕ್, ಟೀಂ ಇಂಡಿಯಾ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬೆಂಗಳೂರು(ಅ.7): ಟೀಂ ಇಂಡಿಯಾ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ವೇಗದ ಬೌಲರ್'ಗಳ ಪೈಕಿ ಜಹೀರ್ ಖಾನ್ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಮಾಜಿ ಕ್ರಿಕೆಟಿಗ ಜಹೀರ್ ಇಂದು 39ನೇ ವಸಂತಕ್ಕೆ ಕಾಲಿರಿಸಿದ್ದಾರೆ.
2011ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ವೇಗದ ಬೌಲಿಂಗ್ ಸಾರಥ್ಯ ವಹಿಸಿದ್ದ ಜಾಕ್, ಟೀಂ ಇಂಡಿಯಾ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಜಹೀರ್ ಖಾನ್ ಸಹಪಾಠಿಗಳಾಗಿದ್ದ ವಿರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಎಡಗೈ ವೇಗಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್'ನಲ್ಲಿ ಭಾರತದ ಪರವಾಗಿ 4ನೇ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎನ್ನುವ ಶ್ರೇಯಕ್ಕೆ ಜಹೀರ್ ಖಾನ್ ಪಾತ್ರವಾಗಿದ್ದಾರೆ.
ಜಹೀರ್ ಖಾನ್ ಹುಟ್ಟುಹಬ್ಬಕ್ಕೆ ಕ್ರಿಕೆಟ್ ದಿಗ್ಗಜರು ಶುಭಕೋರಿದ್ದು ಹೀಗೆ...