Kalyana Karnataka Recruitment Process: 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭ ಎಂದ ಬೊಮ್ಮಾಯಿ
ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಲ್ಬುರ್ಗಿ(ಜ.5): ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ (recruitment) ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ) ತಿಳಿಸಿದ್ದಾರೆ. ಅವರು ಜನವರಿ 4 ರಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಕೆಕೆಆರ್ ಡಿಬಿ (Kalyana Karnataka Region Development Board ) ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ ಈ ವಾರದಲ್ಲಿ ಕೆಕೆಆರ್ ಡಿ ಬಿಗೆ ಪೂರ್ಣ ಪ್ರಮಾಣದ ಅಧಿಕಾರಿಗಳನ್ನು ನೀಡಲಾಗುವುದು. ಇನ್ನೆರಡು ದಿನಗಳಲ್ಲಿ ಕೆಕೆಆರ್ ಡಿಬಿ ಮಂಡಳಿಯ ರಚನೆ ಆಗಲಿದೆ. ಮಂಡಳಿಗೆ 3000 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಮನಗರದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿಯ ವರ್ತನೆ ನಮ್ಮ ಕರ್ನಾಟಕದ ಸಂಸ್ಕೃತಿ ಅಲ್ಲ. ಮಾತಿನ ಮೂಲಕ ಸೌಹಾರ್ದಯುತವಾಗಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಬಹುದೇ ಹೊರತು ಇಂತಹ ವರ್ತನೆ ಯಾರಿಗೂ ಶೋಭೆ ತರುವಂಥದಲ್ಲ ಎಂದು ತಿಳಿಸಿದರು.
NIMHANS RECRUITMENT 2022: ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್
ಜನರ ಸಹಕಾರ ಬಹಳ ಮುಖ್ಯ:
ಕೋವಿಡ್ ನಿಯಂತ್ರಣದಲ್ಲಿ ಜನರ ಸಹಕಾರ ಬಹಳ ಮುಖ್ಯ. ರಾಜ್ಯ ಸರ್ಕಾರದ ನಿಯಂತ್ರಣ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಕೋವಿಡ್ 1 ಹಾಗೂ 2ನೇ ಅಲೆ ನಿರ್ವಹಣೆಯ ಅನುಭವ ಹೊಂದಿದ್ದು, ಆರೋಗ್ಯ ಮೂಲಸೌಕರ್ಯಗಳನ್ನು ವೃದ್ಧಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಬೆಡ್ಸ್, ಐಸಿಯು, ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲೆಗಳಿಂದ ಔಷಧಿಗಳ ಬೇಡಿಕೆಯನ್ನು ತರಿಸಿಕೊಳ್ಳಲಾಗಿದೆ. ಚಿಕಿತ್ಸಾ ಸೌಲಭ್ಯಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ತಜ್ಞರ ಸಲಹೆಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Unemployment: ನಿರುದ್ಯೋಗ ದರ ಶೇ.7.9ಕ್ಕೇರಿಕೆ: 4 ತಿಂಗಳ ಗರಿಷ್ಠ!
ಸರ್ಕಾರದ ಹೊಸ ನಿಯಮವೇನು?: ಓಮಿಕ್ರಾನ್ ಹಾವಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಬೆಂಗಳೂರಿಗೆ ಸೀಮಿತವಾದಂತೆ ಶಾಲೆಗಳಿಗೆ ರಜೆ ನೀಡಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಿದೇಶದಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಒಂದು ವೇಳೆ ಪ್ರಯಾಣಿಕರಲ್ಲಿ ಓಮಿಕ್ರಾನ್ ಸೋಂಕು ಕಂಡುಬಂದರೆ ಅವರಿಗೆ ಸ್ಟಾರ್ ಹೋಟೆಲ್‌ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತದೆ.ಇನ್ನು ರಾಜ್ಯದಲ್ಲಿರುವ ಸಿನಿಮಾ ಮಂದಿರ, ಮಾಲ್ ಹಾಗೂ ಪಬ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮದುವೆ ಸಮಾರಂಭಗಳು ಹೊರಾಂಗಣದಲ್ಲಿದ್ದರೆ 200 ಜನ ಹಾಗೂ ಒಳಾಂಗಣದಲ್ಲಿದ್ದರೆ 100 ಜನಕ್ಕೆ ಅನುಮತಿ ಕಲ್ಪಿಸಲಾಗಿದೆ.
ಓಮಿಕ್ರಾನ್ ಹೆಚ್ಚು ಕಾಲ ಇರುವುದಿಲ್ಲ: ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಅಲೆ ದೀರ್ಘ ಕಾಲ ಇರುವುದಿಲ್ಲ. ವೇಗವಾಗಿ ಹರಡುತ್ತದೆ ಮತ್ತು ಬೇಗ ಮುಕ್ತಾಯ ಆಗುತ್ತದೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು. ಕೊರೊನಾ ಬಂದರು ಯಾರು ಆತಂಕ ಪಡುವುದು ಬೇಡ. ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗುವುದು ಕಡಿಮೆ. ಗಂಟಲಲ್ಲಿ ಮಾತ್ರ ಇರುತ್ತದೆ. ಹೀಗಾಗಿ ಯಾರು ಆತಂಕ ಪಡಬೇಕಿಲ್ಲ ಅಂತ ಎಂದು ಸಚಿವ ಡಾ. ಸುಧಾಕರ ಹೇಳಿದ್ದಾರೆ.