ನಿರುದ್ಯೋಗಿಗಳಿಗೆ ಸಂಸತದ ಸುದ್ದಿ..!
ಹೊಸ ಕೈಗಾರಿಕಾ ನೀತಿ ಸಮರ್ಪಕವಾಗಿ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಅಂದಾಜು. 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಆಕರ್ಷಣೆ ಮತ್ತು 20 ಲಕ್ಷ ಜನರಿಗೆ ಉದ್ಯೋಗಾವಕಾಶ: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ
ಗದಗ(ಜ.21): ಮುಂದಿನ 4 ವರ್ಷದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸಲು ಅಗತ್ಯ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ರೂಪಿಸುತ್ತಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದ್ದಾರೆ.
ಅವರು ಬುಧವಾರ ಸಂಜೆ ಬೆಂಗಳೂರಿನ ಲಲಿತ ಅಶೋಕ ಹೊಟೇಲ್ ಆತ್ಮನಿರ್ಭರ ಭಾರತ ಯೋಜನೆ ಅಡಿಯಲ್ಲಿ ಲಘು ಉದ್ಯೋಗ ಭಾರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಅವರು, ಹೂಡಿಕೆದಾರರನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರದ ಹೊಸ ಕೈಗಾರಿಕಾ ನೀತಿಯಂತೆ 2020-2025ರ ಕೈಪಿಡಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಹೊಸ ಕೈಗಾರಿಕಾ ನೀತಿಯನ್ನು ಸಮರ್ಪಕವಾಗಿ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಅಂದಾಜು. 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಆಕರ್ಷಣೆ ಮತ್ತು 20 ಲಕ್ಷ ಜನರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ
ಈ ವೇಳೆ ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಉದ್ಯಮಗಳ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ರಾಜ್ಯ ಸಚಿವ ಪ್ರತಾಪಚಂದ್ರ ಸಾರಂಗಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಅಧಿಕಾರಿಗಳಾದ ಗೌರವ ಗುಪ್ತಾ, ಜಿ. ಕುಮಾರ ನಾಯಕ ಹಾಗೂ ಬಿ. ಶ್ರೀನಿವಾಸ ರಾವ್, ವಿ.ಎಂ. ಗಿರಿಧರ ಸೇರಿ ಇತರರ ಅಧಿಕಾರಿಗಳು ಉಪಸ್ಥಿತಿ ಇದ್ದರು.